HomeKarnatakaಯಡಿಯೂರಪ್ಪ, ವಿಜಯೇಂದ್ರರನ್ನು ಟೀಕಿಸಿದ ಯತ್ನಾಳ್ ರಿಂದಲೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಸಿಎಂ ಸಿದ್ಧರಾಮಯ್ಯ

ಯಡಿಯೂರಪ್ಪ, ವಿಜಯೇಂದ್ರರನ್ನು ಟೀಕಿಸಿದ ಯತ್ನಾಳ್ ರಿಂದಲೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ: ರಾಜ್ಯದಲ್ಲಿ ಬಡವರು ಹಸಿದು ಮಲುಗಬಾರದು ಎನ್ನುವ ಕಾರಣಕ್ಕೆ ಅನ್ನ ಭಾಗ್ಯ ಜಾರಿಗೆ ತಂದಿದ್ದೇನೆ.‌ ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿ ಆಗಿದ್ದಾಗ ಆಹಾರ‌ ಭದ್ರತಾ ಕಾಯ್ದೆ ಜಾರಿ ಮಾಡಿದ್ದರಿಂದ ಇಲ್ಲಿ ನಾನು ಅನ್ನಭಾಗ್ಯ ಜಾರಿಗೆ ತರಲು ಸಾಧ್ಯವಾಯಿತು. ಆದ್ದರಿಂದ ಕಾಂಗ್ರೆಸ್ ಪಕ್ಷದ ಕಾಳಜಿಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಿರೂರ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಎಚ್.ವೈ.ಮೇಟಿಯವರು ಐದು ಬಾರಿ ಶಾಸಕರು, ಎರಡು ಬಾರಿ ಸಚಿವರು ಮತ್ತು ಒಮ್ಮೆ ಸಂಸದರಾಗಿ ಎಲ್ಲರನ್ನೂ ಗೌರವವಾಗಿ ಕಾಣುತ್ತಾ ಜಾತಿ ಸೋಂಕನ್ನು ಸೋಕಿಸಿಕೊಂಡಿರಲಿಲ್ಲ. ಬಡವರು ಮತ್ತು ಹಿಂದುಳಿದವರ ಪರವಾಗಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಉಮೇಶ್ ಮೇಟಿಯವರನ್ನು ಗೆಲ್ಲಿಸಿದರೆ ಎಚ್.ವೈ.ಮೇಟಿಯವರ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸಲು ಸಾಧ್ಯವಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಒಂದು ಬಾರಿಯೂ ಅಧಿಕಾರಕ್ಕೆ ಬರಲಿಲ್ಲ. ಬಿಜೆಪಿಗೆ ರಾಜ್ಯದ ಜನರ ಆಶೀರ್ವಾದ ಇಲ್ಲದಿದ್ದರಿಂದ ಆಪರೇಷನ್ ಕಮಲದ ಮೂಲಕ ಅಪಾರ ಹಣ ಖರ್ಚು ಮಾಡಿ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿದ್ದಾರೆ. ನಮ್ಮ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವ ಯಡಿಯೂರಪ್ಪ ಅವರಿಗೆ ಆಪರೇಷನ್ ಕಮಲ ಮಾಡಲು ಅಷ್ಟೊಂದು ಹಣ ಎಲ್ಲಿಂದ ಬಂತು ಎನ್ನುವುದನ್ನು ನೀವೆಲ್ಲಾ ಕೇಳಬೇಕಿದೆ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಮತ್ತು ವಿಜಯೇಂದ್ರ ಅತ್ಯಂತ ಭ್ರಷ್ಟರು ಎಂದು ಯತ್ನಾಳ್ ಅವರು ಹೇಳುತ್ತಾರೆ. ಅದೇ ಯತ್ನಾಳ್ ಅವರನ್ನು ಬಿಜೆಪಿ ನಾಯಕರು ಬಾಗಲಕೋಟೆಗೆ ಕರೆಸಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಬಿಜೆಪಿ ಸರ್ಕಾರದಲ್ಲಿ ನಡೆಯುವ ಕಮಿಷನ್ ದಂಧೆ ಬಗ್ಗೆ ಪತ್ರ ಬರೆದಿದ್ದರು. ಇಂಥಾ ಬಿಜೆಪಿಯವರಿಂದ ನಾವು ಭ್ರಷ್ಟಾಚಾರದ ಮಾತು ಕೇಳಬೇಕಾ ಎಂದು ಪ್ರಶ್ನಿಸಿದ್ದಾರೆ.

ಹಸಿವುಮುಕ್ತ ರಾಜ್ಯ ನಮ್ಮದಾಗಬೇಕು ಎನ್ನುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ತಂದಿದ್ದೆ. ಆದ್ದರಿಂದ ನಾನು ಸಾಲದ ರಾಮಯ್ಯ ಅಲ್ಲ , ಅನ್ನದ ರಾಮಯ್ಯ. ಇದು ಜನರೇ ಪ್ರೀತಿಯಿಂದ ಕೊಟ್ಟ ಹೆಸರು. ದುಡಿಯುವವರ, ಮಹಿಳೆಯರ, ಶ್ರಮಿಕರ ಮತ್ತು ಹಿಂದುಳಿದವರ, ದಲಿತರ ವಿರೋಧ ಪಕ್ಷವಾದ ಬಿಜೆಪಿಯನ್ನು ಬೆಂಬಲಿಸಬೇಡಿ. ಉಮೇಶ್ ಮೇಟಿಯವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular