HomeLatest NewsSHOCKING : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ, HIV ಇದೆ...

SHOCKING : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ, HIV ಇದೆ ಎಂದರೂ ಬಿಡದ ಕಾಮುಕ.!

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಸಮಾಜವೇ ತಲೆತಗ್ಗಿಸುವಂತಹ ಘೋರ ಕೃತ್ಯವೊಂದು ಬೆಳಕಿಗೆ ಬಂದಿದೆ. ಏಪ್ರಿಲ್ 2ರ ಗುರುವಾರ ಸಂಜೆ ಮಾಚೆರ್ಲಾದಲ್ಲಿ ಸರ್ಕಾರಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿರುವ 35 ವರ್ಷದ ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ‘ದಾಹವಾಗುತ್ತಿದೆ, ಕುಡಿಯಲು ಸ್ವಲ್ಪ ನೀರು ಕೊಡಿ’ ಎಂದು ಕೇಳಿ ನಂಬಿಸಿ ಮನೆಯೊಳಗೆ ಪ್ರವೇಶಿಸಿದ್ದಾನೆ.

ಮನೆಯೊಳಗೆ ಹೋದ ತಕ್ಷಣ ಆತ ಮಹಿಳೆಯ ಮೇಲೆ ಲೈಂಗಿಕ ದಾಳಿಗೆ ಯತ್ನಿಸಿದ್ದಾನೆ. ಸಂತ್ರಸ್ತೆ ತನಗೆ ಅನಾರೋಗ್ಯ (ಎಚ್‌ಐವಿ) ಇದೆ ಎಂದು ಎಷ್ಟೇ ಮೊರೆ ಇಟ್ಟರೂ ಕಿಂಚಿತ್ತೂ ದಯೆ ತೋರದ ಕಿರಾತಕ, ಆಕೆಯ ಕುತ್ತಿಗೆಗೆ ಸ್ಕಾರ್ಫ್‌ನಿಂದ ಬಿಗಿದು, ಕತ್ತಿ ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಅಷ್ಟಕ್ಕೇ ನಿಲ್ಲದ ಆತ ಮಹಿಳೆಯ ಮರ್ಮಾಂಗಕ್ಕೆ ಕಬ್ಬಿಣದ ರಾಡ್ ಚುಚ್ಚಿ ಅತ್ಯಂತ ಕ್ರೂರವಾಗಿ ಹಿಂಸಿಸಿ ಅಲ್ಲಿಂದ ಪರಾರಿಯಾಗಿದ್ದಾನೆ.

ಬೆಳಕಿಗೆ ಬಂದಿದ್ದು ಹೇಗೆ ?: ಮಹಿಳೆಯ ಜೊತೆ ವಾಸವಿದ್ದ ಆಕೆಯ ಸೋದರಳಿಯ ಪರೀಕ್ಷೆ ಮುಗಿಸಿ ಪೋಷಕರ ಬಳಿ ಹೋಗಿದ್ದನು. ಸಾಯಂಕಾಲ ಅತ್ತೆಗೆ ಫೋನ್ ಮಾಡಿದಾಗ ಅವರು ಸ್ವೀಕರಿಸದ ಕಾರಣ ಅನುಮಾನಗೊಂಡು ಸಂಬಂಧಿಕರನ್ನು ಮನೆಗೆ ಕಳುಹಿಸಿದ್ದಾನೆ. ಸಂಬಂಧಿಕರು ಹೋಗಿ ನೋಡಿದಾಗ ಮಹಿಳೆ ರಕ್ತದ ಮಡುವಿನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಅವರನ್ನು ನರಸರಾವ್ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ತನಿಖೆ: ಘಟನೆಗೆ ಸಂಬಂಧಿಸಿದಂತೆ ಮಾಚೆರ್ಲಾ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಲ್ನಾಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ ಆರೋಪಿಯ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಪಟ್ಟಣದ ಸಿಸಿಟಿವಿ ಫುಟೇಜ್‌ಗಳನ್ನು ಪೊಲೀಸರು ಜಾಲಾಡುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular