HomeKarnatakaಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ದಾವಣಗೆರೆ: 2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ.

ಅರ್ಜಿಗಳನ್ನು ಏಪ್ರಿಲ್‌ 15 ರಿಂದ ಪಡೆದುಕೊಂಡು ಮೇ 04 ರೊಳಗೆ ಸಲ್ಲಿಸಬಹುದು. ಆಸಕ್ತ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಕನಿಷ್ಠ ಶೇ. 60ರಷ್ಟು ಅಂಕಗಳನ್ನು ಪಡೆದಿರಬೇಕು.  ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ. 2.50 ಲಕ್ಷಗಳ ಮಿತಿಯೊಳಗಿರಬೇಕು. ಅರ್ಹತಾ ಪರೀಕ್ಷೆ ಮತ್ತು ಮೇ 19ರಂದು ನಡೆಯುವ ಕೌನ್ಸಿಲಿಂಗ್ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಆಸಕ್ತರು ದಾವಣಗೆರೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದಾವಣಗೆರೆ, ಚನ್ನಗಿರಿ, ಜಗಳೂರು ತಾಲ್ಲೂಕುಗಳ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08192-263546 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular