ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಕೂರು ತಾಲ್ಲೂಕಿನ ರಾಜಾಪುರ ಬಳಿ ನಡೆದಿದೆ.
ಕಾರು ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ತೆರಳುತ್ತಿತ್ತು. ಈ ವೇಳೆ ಲಾರಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ರವಿಚಂದ್ರ (40) ಮತ್ತು ಸಂತೋಷ್ (25) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

