HomeKarnatakaಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ: ಇಬ್ಬರು ಸಾವು; 30ಕ್ಕೂ...

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ: ಇಬ್ಬರು ಸಾವು; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ಶಿರಾ ತಾಲ್ಲೂಕಿನ ಮಿನಿ ವಿಧಾನಸೌಧ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಖಾಸಗಿ ಸ್ಲೀಪರ್​​ ಬಸ್​​ಗೆ ಕೆ.ಎಸ್.ಆರ್.ಟಿ.ಸಿ ಬಸ್​​ ಹಿಂದಿನಿಂದ ಗುದ್ದಿದೆ. ಅಪಘಾತದ ರಭಸಕ್ಕೆ ಖಾಸಗಿ ಬಸ್​​ನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

ಮೃತರನ್ನು ಹಾವೇರಿ ಮೂಲದ ಪ್ರವೀಣ್ ಕೃಷ್ಣಪ್ಪ (28) ಮತ್ತು ಗದಗ ಮೂಲದ ಸಂಗೀತಾ (16) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತವಾಗಿರುವ ಎರಡೂ ಬಸ್​​ಗಳು ಬೆಂಗಳೂರಿಗೆ ಬರುತ್ತಿದ್ದವು. ಹೆದ್ದಾರಿಯ ಮೂರನೇ ಲೇನ್​​ನಿಂದ ಏಕಾಏಕಿ ಎರಡನೇ ಲೇನ್​​ಗೆ ಖಾಸಗಿ ಬಸ್ ಬಂದಿರೋದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪರಿಣಾಮ ಖಾಸಗಿ ಬಸ್​​ನ ಹಿಂಬದಿ ಸೀಟ್​​ಗಳಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪತ್ಯೇಕ ಪ್ರಕರಣಗಳು ದಾಖಲಾಗಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular