HomeLatest Newsಪತ್ನಿ ಕೊಲೆಗೈದು ನೇಣು ಹಾಕಿದ್ದ ಪತಿ ಅರೆಸ್ಟ್

ಪತ್ನಿ ಕೊಲೆಗೈದು ನೇಣು ಹಾಕಿದ್ದ ಪತಿ ಅರೆಸ್ಟ್

ಮೈಸೂರು: ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಕೊಲೆಗೈದು ಬಳಿಕ ಶವವನ್ನು ನೇಣು ಬಿಗಿದು ಆತ್ಮಹತ್ಯೆ ಎಂದು ಬಿಂಬಿಸಿ ನಾಪತ್ತೆಯಾಗಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಿದರಹಳ್ಳಿ ಗ್ರಾಮದ ನಿವಾಸಿ ಶ್ರುತಿ (30) ಹತ್ಯೆಯಾದ ಮಹಿಳೆ. ಜಗದೀಶ್ (45) ಪತ್ನಿಯನ್ನೇ ಕೊಲೆಗೈದ ಪತಿ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೇರಳಾಪುರ ನಿವಾಸಿಯಾದ ಜಗದೀಶ್ ಜೊತೆ ಶ್ರುತಿ ವಿವಾಹ 12 ವರ್ಷಗಳ ಹಿಂದೆ ನಡೆದಿತ್ತು. ದಂಪತಿಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಿದೆ. ಬೇಕರಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಕ್ಷುಲ್ಲಕ ವಿಚಾರಗಳಿಗೂ ಪದೇ ಪದೇ ಜಗಳವಾಗುತ್ತಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ರೀತಿ ಕಳೆದ ಗುರುವಾರ ಮಧ್ಯಾಹ್ನ ಪತ್ನಿಯೊಂದಿಗೆ ಜಗಳವಾಡಿದ ಜಗದೀಶ್, ಆಕೆಗೆ ಕೈಯಿಂದ ಹೊಡೆದು ಸಾಯಿಸಿದ್ದಾನೆ. ಬಳಿಕ ಆತ್ಮಹತ್ಯೆಯಂತೆ ಬಿಂಬಿಸಲು ಸೀರೆಯಿಂದ ನೇಣು ಹಾಕಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ್ ಬಾಲದಂಡಿ ಹಾಗೂ ಹುಣಸೂರು ಪೊಲೀಸ್ ಉಪಾಧೀಕ್ಷಕ ರವಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದರು. ಆರೋಪಿಯ ಬಂಧನಕ್ಕೆ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇದೀಗ ಆರೋಪಿ ಜಗದೀಶ್ ಅನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular