HomeKarnatakaಬೆಂಗಳೂರಿನಲ್ಲಿ ಬಾಲಕನ ಮೇಲೆ ಸಾಕು ನಾಯಿ ದಾಳಿ: ಮಾಲೀಕನ ವಿರುದ್ಧ ಕೇಸ್ ದಾಖಲು

ಬೆಂಗಳೂರಿನಲ್ಲಿ ಬಾಲಕನ ಮೇಲೆ ಸಾಕು ನಾಯಿ ದಾಳಿ: ಮಾಲೀಕನ ವಿರುದ್ಧ ಕೇಸ್ ದಾಖಲು

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಾಳಿ ದಾಳಿಯಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇಷ್ಟಾದರೂ ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳಿಗೆ ಕಡುವಾಣ ಹಾಕುವ ಕೆಲಸ ಸಮರ್ಪಕವಾಗಿ ಮಾಡುತ್ತಿಲ್ಲ.

ಬೆಂಗಳೂರಿನಲ್ಲಿ ಬಾಲಕನ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿರುವ ಘಟನೆ ನಡೆದಿದೆ. ಬ್ರೆಡ್ ತರಲು ಹೋಗಿದ್ದ ಬಾಲಕನೊಬ್ಬನಿಗೆ ಸಾಕು ನಾಯಿಯೊಂದು ಕಚ್ಚಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ರಾಜಾಜಿನಗರದಲ್ಲಿ ಈ ಘಟನೆ ನಡೆದಿದೆ. ರಾಜಾಜಿನಗರದ 1ನೇ ಬ್ಲಾಕ್​ನಲ್ಲಿ ವಾಸವಿರುವ 11 ವರ್ಷದ ಬಾಲಕ ಬ್ರೆಡ್ ತರುವುದಕ್ಕಾಗಿ ಮನೆಯಿಂದ ಹೊರಹೋಗಿದ್ದ. ಸ್ವಲ್ಪ ದೂರ ಹೋಗ್ತಿದ್ದಂತೆ ರಸ್ತೆಯಲ್ಲಿ ತನ್ನ ಮಾಲೀಕರೊಂದಿಗೆ ವಾಕ್ ಮಾಡ್ತಿದ್ದ ಶ್ವಾನವೊಂದು ದಾಳಿ ಮಾಡಿದೆ. ಬಾಲಕನ ತೊಡೆಗೆ ಕಚ್ಚಿ ಗಾಯಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಸಂಭವಿಸಿದರೂ ಶ್ವಾನದ ಮಾಲೀಕರು ಬಾಲಕನಿಗೆ ಚಿಕಿತ್ಸೆ ಕೂಡ ಕೊಡಿಸಿರಲಿಲ್ಲ‌. ಹೀಗಾಗಿ, ಕುಟುಂಬಸ್ಥರೇ ಚಿಕಿತ್ಸೆ ವೆಚ್ಚ ಭರಿಸಿದ್ದರು. ಇದೀಗ ಬಾಲಕನ ಪೋಷಕರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ನಾಯಿ ಮಾಲೀಕನ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಯಿಯ ಮಾಲೀಕನಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular