ಮಡಿಕೇರಿ: ಮದುವೆ ನಂತರ ಮೊದಲ ಬಾರಿಗೆ ಪತಿ ವಿಜಯ್ ದೇವರಕೊಂಡ ಜತೆಗೆ ನಟಿ ರಶ್ಮಿಕಾ ಮಂದಣ್ಣ ತವರಿಗೆ ಆಗಮಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯ ನಿವಾಸಕ್ಕೆ ನಟಿ ರಶ್ಮಿಕಾ ಮಂದಣ್ಣ ಆಗಮಿಸಿದ್ದಾರೆ. ನಿನ್ನೆಯಷ್ಟೇ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಶ್ಮಿಕಾ ಮಂದಣ್ಣ ಇಂದು ತವರಿಗೆ ಆಗಮಿಸಿದ್ದಾರೆ.
ಕೊಡಗು ಜಿಲ್ಲೆ ವಿರಾಜಪೇಟೆ ಹೊರವಲಯದಲ್ಲಿರುವ ಕದನೂರು ನಿವಾಸಕ್ಕೆ ಆಗಮಿಸಿದ ರಶ್ಮಿಕಾ ಮಂದಣ್ಣ ಅವರಿಗೆ ಮದುವೆ ಉಡುಗೊರೆಯಾಗಿ ಅವರ ತಂದೆ ಮದನ್ ಮಂದಣ್ಣ ತಮ್ಮ ಮನೆ ನೀಡಿದ್ದಾರೆ. ವಿರಾಜಪೇಟೆಯ ಪಟ್ಟಣ ಪಂಚಾಯಿತಿ ಸದಸ್ಯರಾಗಿದ್ದ ಮದನ್ ಮಂದಣ್ಣ ಮತ್ತು ಪತ್ನಿ ಸುಮನ್ ಮಂದಣ್ಣ ಅವರ ಹೆಸರಿನಲ್ಲಿದ್ದ ಮನೆಯನ್ನು ವಿರಾಜಪೇಟೆ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ರಶ್ಮಿಕಾ ಮಂದಣ್ಣ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಟ್ಟಿದ್ದಾರೆ. ವಕೀಲರಾದ ರೀನಾ ಪ್ರಕಾಶ್ ದಾನ ಪತ್ರ ಮತ್ತು ದಾಖಲೆ ಪತ್ರಗಳನ್ನು ನಿರ್ವಹಿಸಿದ್ದಾರೆ.

