HomeKarnatakaಉಪ ಚುನಾವಣೆ ರೋಡ್ ಶೋ ವೇಳೆ ಹೃದಯಾಘಾತದಿಂದ ಮಹಿಳೆ ಸಾವು: ಅಂತಿಮ ದರ್ಶನ ಪಡೆದ ಸಿಎಂ

ಉಪ ಚುನಾವಣೆ ರೋಡ್ ಶೋ ವೇಳೆ ಹೃದಯಾಘಾತದಿಂದ ಮಹಿಳೆ ಸಾವು: ಅಂತಿಮ ದರ್ಶನ ಪಡೆದ ಸಿಎಂ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಸಿಎಂ ಸಿದ್ಧರಾಮಯ್ಯ ಮತ್ತು ಸಚಿವರು ಸೇರಿದಂತೆ ನಾಯಕರು ಮತಯಾಚನೆ ಮಾಡಿದ್ದಾರೆ.

ರೋಡ್ ಶೋದಲ್ಲಿ ಭಾಗವಹಿಸಿದ್ದ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಫಾತಿಮಾ ತುಪ್ಪದ್ ಮೃತಪಟ್ಟ ಮಹಿಳೆ. ಬಾಗಲಕೋಟೆಯ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಮೆರವಣಿಗೆಯಲ್ಲಿ ಫಾತಿಮಾ ಭಾಗವಹಿಸಿದ್ದ ವೇಳೆ ಘಟನೆ ನಡೆದಿದೆ. ಫಾತಿಮಾ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪ್ರಚಾರಸಭೆ ವೇದಿಕೆಯಲ್ಲಿ ಮೌನಾಚರಣೆಯ ಮೂಲಕ ಫಾತಿಮಾ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ಸಿಎಂ ಸಿದ್ಧರಾಮಯ್ಯ ಆಸ್ಪತ್ರೆಗೆ ತೆರಳಿ ಫಾತಿಮಾ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಗಲಕೋಟೆಯಲ್ಲಿ ಉಪಚುನಾವಣೆ ಅಂಗವಾಗಿ ಆಯೋಜಿಸಿದ್ದ ರೋಡ್ ಶೋ ವೇಳೆ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಮುಖಂಡರಾದ ಫಾತೀಮಾ ತುಪ್ಪದ್ ಅವರ ಅಂತಿಮ‌ ದರ್ಶನ ಪಡೆದು, ಶ್ರದ್ಧಾಂಜಲಿ ಅರ್ಪಿಸಿದೆ. ಪಕ್ಷದ ಕಾರ್ಯಚಟುವಟಿಕೆಗಳಲ್ಲಿ‌ ಸದಾ ಮುಂಚೂಣಿಯಲ್ಲಿರುತ್ತಿದ್ದ ಫಾತಿಮಾ ಅವರ ನಿಧನದಿಂದ ಇಡೀ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

https://twitter.com/siddaramaiah/status/2041199767682703421

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular