HomeKarnatakaಬಿಎಂಟಿಸಿ ಸಿಬ್ಬಂದಿಗೆ ಶೇ. 3, ಉಳಿದ ಸಾರಿಗೆ ನಿಗಮ ನೌಕರರಿಗೆ ಶೇ.5ರಷ್ಟು ವೇತನ ಹೆಚ್ಚಳ: ಏ....

ಬಿಎಂಟಿಸಿ ಸಿಬ್ಬಂದಿಗೆ ಶೇ. 3, ಉಳಿದ ಸಾರಿಗೆ ನಿಗಮ ನೌಕರರಿಗೆ ಶೇ.5ರಷ್ಟು ವೇತನ ಹೆಚ್ಚಳ: ಏ. 17ರಂದು ಸಭೆ

ಬೆಂಗಳೂರು: 2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಏಪ್ರಿಲ್ 17ರಂದು ಸಭೆ ನಿಗದಿಯಾಗಿದೆ.

ಬಿಎಂಟಿಸಿ ನೌಕರರಿಗೆ ಶೇಕಡ 3, ಕೆ.ಎಸ್.ಆರ್.ಟಿ.ಸಿ., ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ., ಕೆ.ಕೆ.ಆರ್.ಟಿ.ಸಿ. ನೌಕರಿರಿಗೆ ಶೇಕಡ 5ರಷ್ಟು ವೇತನ ಹೆಚ್ಚಳ ಪ್ರಸ್ತಾಪವನ್ನು ಕೆಎಸ್ಆರ್ಟಿಸಿ ಅಧಿಕಾರಿಗಳು ಸಾರಿಗೆ ನೌಕರರ ಸಂಘಟನೆಗಳ ಮುಂದಿಟ್ಟು ಚರ್ಚಿಸಲು ಏಪ್ರಿಲ್ 17ರಂದು ಸಭೆ ನಡೆಸಲು ನಿರ್ಧರಿಸಲಾಗಿದೆ.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಶಾ ನೇತೃತ್ವದಲ್ಲಿ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪ್ರಮುಖರೊಂದಿಗೆ ಸಭೆ ನಡೆಸಲಾಗಿದೆ. 2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಹೊಸದಾಗಿ ವೇತನ ಹೆಚ್ಚಳ ಮಾಡುವ ಬಗ್ಗೆ ಚರ್ಚಿಸಲಾಗಿದೆ. 26 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಸರ್ಕಾರ ಘೋಷಿಸಿದ 1271.92 ಕೋಟಿ ರೂ.ಗಳನ್ನು ಶೀಘ್ರ ನಿಗಮಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಅಕ್ರಂ ಪಾಶಾ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರಿಗೆ ನೌಕರರ ಸಂಘಟನೆಯ ಪ್ರಮುಖರು ಆಕ್ಷೇಪ ವ್ಯಕ್ತಪಡಿಸಿದ್ದು, 2021ರ ಜನವರಿ 1ರಿಂದ 2023ರ ಫೆಬ್ರವರಿ 28 ರವರೆಗಿನ ವೇತನ ಹೆಚ್ಚಳ ಹಿಂಬಾಕಿ ಜೊತೆಗೆ 2020 ರ ಜನವರಿ 1ರಿಂದ ಡಿಸೆಂಬರ್ 31ರವರೆಗಿನ ವೇತನ ಹೆಚ್ಚಳ ಹಿಂಬಾಕಿ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

2025ರ ಆಗಸ್ಟ್ 5ರಂದು ನಡೆದ ಮುಷ್ಕರದ ಸಂದರ್ಭದಲ್ಲಿ ನೌಕರರ ಮೇಲಿನ ಶಿಸ್ತು ಕ್ರಮ ರದ್ದುಗೊಳಿಸಬೇಕು ಎಂದು ತಿಳಿಸಿದ್ದಾರೆ. ಇದಕ್ಕೆ ಅಕ್ರಂ ಪಾಷಾ ಅವರು 2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಬಿಎಂಟಿಸಿಗೆ ಶೇಕಡ 3, ಉಳಿದ ಮೂರು ನಿಗಮಗಳಿಗೆ ಶೇಕಡ 5ರಷ್ಟು ವೇತನ ಹೆಚ್ಚಳ ಪ್ರಸ್ತಾಪ ಮಾಡಿದ್ದಾರೆ. ಕೆಎಸ್ಆರ್ಟಿಸಿಯಿಂದ ನೀಡಲಾದ ಪ್ರಸ್ತಾಪದ ಕುರಿತು ಜಂಟಿ ಕ್ರಿಯಾ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಏಪ್ರಿಲ್ 17ರಂದು ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular