ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಬೈಲಕೇರಿಯಲ್ಲಿ ಮ್ಯೂಸಿಕಲ್ ಚೇರ್ ಸ್ಪರ್ಧೆ ವೇಳೆ ಕುಸಿದು ಬಿದ್ದು ಮಹಿಳೆ ಮೃತಪಟ್ಟಿದ್ದಾರೆ.
ಬೈಲಕೇರಿಯ ಗೌರಿ ಕುಸ್ಲುಗೌಡ(55) ಮೃತಪಟ್ಟವರು. ಬೈಲಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಅಂಗವಾಗಿ ಭಾನುವಾರ ನಡೆದ ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವೇಳೆ ಘಟನೆ ನಡೆದಿದೆ.
ಮ್ಯೂಸಿಕಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗೌರಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರಲಾಗಿದೆ. ಪರೀಕ್ಷಿಸಿದ ವೈದ್ಯರು ಗೌರಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಬೈಲಕೇರಿ ಶಾಲೆಯ ಸುವರ್ಣ ಮಹೋತ್ಸವ ಪ್ರಯುಕ್ತ ಹಳೆಯ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ವಿವಿಧ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿತ್ತು. ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗೌರಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

