HomeKarnatakaಸಿರಿಗೆರೆ ತರಳಬಾಳು ಶ್ರೀಗಳ ಹೆಸರಿನಲ್ಲಿ ನಕಲಿ ಸಂದೇಶ ವೈರಲ್: ದೂರು ದಾಖಲು

ಸಿರಿಗೆರೆ ತರಳಬಾಳು ಶ್ರೀಗಳ ಹೆಸರಿನಲ್ಲಿ ನಕಲಿ ಸಂದೇಶ ವೈರಲ್: ದೂರು ದಾಖಲು

ದಾವಣಗೆರೆ: ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ನಕಲಿ ಸಂದೇಶಗಳು ಹೆಚ್ಚಾಗಿದೆ. ’

ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಓಟ್​ ಹಾಕಿ ಎಂದು ಸಿರಿಗೆರೆ ಸ್ವಾಮೀಜಿ ಹೆಸರಲ್ಲಿನ ಸಂದೇಶ ವೈರಲ್ ಆಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿರಿಗೆರೆ ತರಳುಬಾಳು ಗುರುಪೀಠದ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ ಅವರ ಹೆಸರಿನಲ್ಲಿ ನಕಲಿ ಸಂದೇಶವೊಂದು ವೈರಲ್ ಆಗಿದ್ದು, ನಿರ್ದಿಷ್ಟ ಅಭ್ಯರ್ಥಿಗೆ ಮತ ನೀಡುವಂತೆ ಕರೆ ನೀಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸ್ವಾಮೀಜಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಪ್ರಚಾರ ನಡೆಯುತ್ತಿದೆಯೇನೋ ಎಂದು ಹಲವರು ಭಾವಿಸಿದ್ದರು. ಆದರೆ ಇದಕ್ಕೆ ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಶ್ರೀಗಳ ಹೆಸರಿನಲ್ಲಿ ನಕಲಿ ಸಂದೇಶ ರವಾನಿಸಲಾಗುತ್ತಿದೆ ಎಂದಿದೆ. ಈ ಸಂದೇಶವು ಸ್ವಾಮೀಜಿಯವರ ನಿಲುವನ್ನು ತಪ್ಪಾಗಿ ಪ್ರತಿಬಿಂಬಿಸುವುದಾಗಿ ಮಠದ ಆಡಳಿತ ಮಂಡಳಿ ಹೇಳಿದೆ.

ಈ ಕುರಿತು ಮಠದ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯನ್ನು ಹರಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇಂತಹ ನಕಲಿ ಸಂದೇಶಗಳು ಮತದಾರರನ್ನು ತಪ್ಪು ದಾರಿಗೆಳೆಯುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸುವಂತೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular