HomeLatest NewsBREAKING : ಬೀದರ್'ನಲ್ಲಿ ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು.!

BREAKING : ಬೀದರ್’ನಲ್ಲಿ ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು.!

ಬೀದರ್ : ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಹೊಸ ಮನೆಯ ಮೇಲ್ಛಾವಣಿ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಔತಣಕೂಟವು ದುರಂತದಲ್ಲಿ ಅಂತ್ಯಗೊಂಡಿದೆ. ಉಣಬಡಿಸಿದ ಆಹಾರ ವಿಷಪೂರಿತಗೊಂಡ (Food Poisoning) ಪರಿಣಾಮ, ಐವರು ಗಂಭೀರ ಸ್ಥಿತಿಯಲ್ಲಿದ್ದು ಒಟ್ಟು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ವಾಂತಿ-ಭೇದಿಯಿಂದ ಬಳಲುತ್ತಿರುವ ಇವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದ ರಾಜಕುಮಾರ್ ಎಂಬುವವರು ತಮ್ಮ ಹೊಸ ಮನೆಯ ಮೇಲ್ಛಾವಣಿ (Slab) ಹಾಕಿದ ಖುಷಿಗೆ ಗ್ರಾಮಸ್ಥರಿಗೆ ಊಟದ ವ್ಯವಸ್ಥೆ ಮಾಡಿದ್ದರು. ಊಟದಲ್ಲಿ ಹುಗ್ಗಿ, ಅನ್ನ ಮತ್ತು ಸಾಂಬಾರ್ ಬಡಿಸಲಾಗಿತ್ತು.ಈ ಆಹಾರ ಸೇವಿಸಿದ ಗ್ರಾಮಸ್ಥರಲ್ಲಿ ಬೆಳಗಿನ ಜಾವ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಅದರಲ್ಲಿ 5 ರಿಂದ 6 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಅಸ್ವಸ್ಥರನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಬೀದರ್‌ನ ಬ್ರಿಮ್ಸ್ (BRIMS) ಆಸ್ಪತ್ರೆಗೆ ದಾಖಲಿಸಲಾಗಿದೆ.ಸುಮಾರು 10 ರಿಂದ 15 ಜನರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.ಮನೆಯ ಮಾಲೀಕರಾದ ರಾಜಕುಮಾರ್, ಸಂಗೀತಾ, ಈರಮ್ಮ, ಶಿವಾನಂದ್ ಮತ್ತು ಅಂಬಿಕಾ ಅವರ ಸ್ಥಿತಿ ಕೂಡ ಗಂಭೀರವಾಗಿದ್ದು, ಉಳಿದವರಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular