HomeLatest Newsಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಬೆಂಕಿ ಇಲ್ಲದೇ ಹೊಗೆಯಾಡುವುದಿಲ್ಲ ಎಂದ ಶಾಸಕ...

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಬೆಂಕಿ ಇಲ್ಲದೇ ಹೊಗೆಯಾಡುವುದಿಲ್ಲ ಎಂದ ಶಾಸಕ ವಿಜಯಾನಂದ ಕಾಶಪ್ಪನವರ್

ಬಾಗಲಕೋಟೆ: ಕೂಡಲಸಂಗಮ ಪಂಚಮಸಾಅಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಕಿಯಿಲ್ಲದೇ ಹೊಗೆಯಾಡುವುದಿಲ್ಲ ಎಂದಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಶಾಸಕ ಕಾಶಪ್ಪನವರ್, ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೆ ಯಾಕೆ ಸ್ಟೇ ತರುತ್ತಿದ್ದರು? ಬಸವ ಜಯಮೃತ್ಯುಂಜಯ ಶ್ರೀ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಎಂದರು.

ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಿದ್ದು. ಬದಲಾಗಲಿ ಎಂದು ಶ್ರೀಗಳಿಗೆ ನೋಟಿಸ್ ಕೂಡ ನೀಡಿದ್ದೆವು. ನೋಟಿಸ್ ನೀಡಿದರೂ ಬದಲಾಗದಿದ್ದಕ್ಕೆ ಅವರನ್ನು ಉಚ್ಛಾಟನೆ ಮಾಡಲಾಯಿತು. ಕಾಲ ಎಲ್ಲದಕ್ಕೂ ಉತ್ತರ ನೀಡುತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular