ಕಲಬುರಗಿ: ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ನಡೆದಿದೆ.
ರಾಜಕುಮಾರ್(45), ಸುಮಾ(14) ಮೃತಪಟ್ಟ ತಂದೆ ಮತ್ತು ಮಗಳು. ಮೃತರು ಕಲಬುರಗಿಯ ರಾಣೇಶ್ ಪೀರ್ ದರ್ಗಾ ಪ್ರದೇಶದ ನಿವಾಸಿಗಳಾಗಿದ್ದಾರೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆ-2ರಲ್ಲಿ ಮೊಕದ್ದಮೆ ದಾಖಲಾಗಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತ ಎಸಗಿದ ಸಿಮೆಂಟ್ ಮಿಕ್ಸರ್ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

