HomeIndiaBIG NEWS: ಕಾಳಿ ಹುಲಿ ಸಂರಕ್ಷಿತ ಪ್ರದೇಶ ಇನ್ನು ಪರಿಸರ ಸೂಕ್ಷ್ಮ ಪ್ರದೇಶ: ಕೇಂದ್ರ ಸರ್ಕಾರ...

BIG NEWS: ಕಾಳಿ ಹುಲಿ ಸಂರಕ್ಷಿತ ಪ್ರದೇಶ ಇನ್ನು ಪರಿಸರ ಸೂಕ್ಷ್ಮ ಪ್ರದೇಶ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಕಾLi ಹುಲಿ ಸಂರಕ್ಷಿತ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಘೋಷಣೆ ಮಾಡಿದೆ. ಈ ಸಂಬಂಧ ಕರಡು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆಗೆ 60 ದಿನ ಸಮಯ ನೀಡಿದೆ.

663 ಕಿಲೋ ಮೀಟರ್ ಚ. ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನ ಸೂಕ್ಷ್ಮ ವಲಯ, ಅರಣ್ಯದ ಅಂಚಿನಿಂದ 10 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ, ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಬರುವ 75 ಚ. ಕಿಲೋಮೀಟರ್ ಪ್ರದೇಶವನ್ನು ಕಂದಾಯ ಪ್ರದೇಶ ಎಂದು ಘೋಷಿಸಲಾಗಿದೆ. 84 ಚ. ಕಿಲೋಮೀಟರ್ ಪ್ರದೇಶ ವ್ಯಾಪ್ತಿಯ ಕಂದಾಯ ಗ್ರಾಮಗಳು 503 ಚ. ಕಿಲೋ ಮೀಟರ್ ಪ್ರದೇಶದ ಅರಣ್ಯದಲ್ಲಿ ಸೇರಿದೆ.

ಈ ಸಂಬಂಧ ಆಕ್ಷೇಪಣೆಗಳಿದ್ದರೆ ಸಲ್ಲಿಸಲು 60 ದಿನ ಕಾಲಾವಕಾಶ ನೀಡಲಾಗಿದೆ. ಅಧಿಸೂಚನೆಯ ನಂತರ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಮಾಸ್ಟರ್ ಪ್ಲಾನ್ ಸಿದ್ಧಪಡಿಸಬೇಕು. ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ ಯೋಜನೆ ರೂಪಿಸಬೇಕು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶ ಪಶ್ಚಿಮ ಘಟ್ಟಗಳ ಅರಣ್ಯದಲ್ಲಿದ್ದು, ಹುಲಿ, ಆನೆ ವೈವಿಧ್ಯಮಯ ವನ್ಯಜೀವಿಗಳ ನೆಲೆಯಾಗಿದೆ. ಹಳಿಯಾಳ, ಕಾರವಾರ, ಜೋಯಿಡಾ ತಾಲೂಕುಗಳ ವ್ಯಾಪ್ತಿಯಲ್ಲಿ ವಿಸ್ತರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular