HomeKarnatakaಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ, ಬೆತ್ತಲೆ ವಿಡಿಯೋ ಕಾಲ್ ಆರೋಪ ಮಾಡಿದ್ದ ಮಹಿಳೆ ನಾಪತ್ತೆ

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ, ಬೆತ್ತಲೆ ವಿಡಿಯೋ ಕಾಲ್ ಆರೋಪ ಮಾಡಿದ್ದ ಮಹಿಳೆ ನಾಪತ್ತೆ

ಬೆಂಗಳೂರು: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮೂಲದ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ, ಬೆತ್ತಲೆ ವಿಡಿಯೋ ಕಾಲ್ ಮತ್ತು ಬ್ಲಾಕ್‌ಮೇಲ್ ಆರೋಪ ಮಾಡಿದ್ದರು. ಈ ಕುರಿತು ರಾಅಜ್ಯ ಮಹಿಳಾಅ ಆಯೋಗದಲ್ಲಿಯೂ ದೂರು ದಾಖಲಿಸಿದ್ದರು. ಅತ್ತ ವಿಜಯಪುರದಲ್ಲಿ ಮಹಿಳೆ ಹಾಗೂ ನಾಲ್ವರ ವಿರುದ್ಧ ಹಣಕ್ಕೆ ಬೇಡಿಕೆ, ಹಲ್ಲೆ, ಬೆದರಿಕೆಯೊಡ್ದಿದ ಆರೋಪದಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಕೂಡ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆ ಸೇರಿ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ ಬೆಳವಣಿಗೆ ನಡುವೆ ಮಹಿಳೆ ನಾಪತ್ತೆಯಾಗಿದ್ದಾರೆ.

ಸ್ವಾಮೀಜಿಯಿಂದ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಮಹಿಳೆ ಇದೀಗ ನಾಪತ್ತೆಯಾಗಿದ್ದಾರೆ. ಮಹಿಳಾ ಆಯೋಗಕ್ಕೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು, ಸಂತ್ರಸ್ತ ಮಹಿಳೆಯಿಂದ ಅಧಿಕೃತ ದೂರು ಪಡೆಯಲು ಮುಂದಾಗಿದ್ದಾರೆ. ಆದರೆ, ಮಹಿಳೆ ಮಾತ್ರ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಎಷ್ಟೇ ಸಂಪರ್ಕಕ್ಕೆ ಯತ್ನ ಮಾಡಿದ್ರೂ ಸಂತ್ರಸ್ಥೆ ಸಂಪರ್ಕಕ್ಕೆ ಸಿಗುತ್ತಿಲ್ಲ. ಮಹಿಳೆಯ ಅಧಿಕೃತ ನಿವಾಸಕ್ಕೂ ಪೊಲೀಸರು ತೆರಳಿ ಪರಿಶೀಲನೆ ಮಾಡಿದರೂ ಸಹ ಪತ್ತೆಯಾಗಿಲ್ಲ. ಮಹಿಳೆ ಫೋನ್ ನಂಬರ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ ಪೊಲೀಸರು ಸದ್ಯಕ್ಕೆ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

ಮಹಿಳೆ ಮಹಿಳಾ ಆಯೋಗಕ್ಕೆ ದೂರು ನೀಡುತ್ತಿದ್ದಂತೆಯೆ ಅತ್ತ ವಿಜಯಪುರ ಗ್ರಾಮೀಣ ಠಾಣೆಗೆ ಸ್ವಾಮೀಜಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ. ಹಲ್ಲೆ ನಡೆಸಿ ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ತಮ್ಮ ಶಿಷ್ಯ ಸಂತೋಷ ಮಂಜಣ್ಣಿ ಮೂಲಕ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಹಿಳೆಯು ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡಿದ್ದಳು. ನನ್ನ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ನೀಡುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಂಬಂಧ ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular