HomeLatest NewsSSLC ಪರೀಕ್ಷೆ ಮೌಲ್ಯಮಾಪನ ; ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿರ್ಬಂಧಿತ ಪ್ರದೇಶ ಘೋಷಣೆ

SSLC ಪರೀಕ್ಷೆ ಮೌಲ್ಯಮಾಪನ ; ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿರ್ಬಂಧಿತ ಪ್ರದೇಶ ಘೋಷಣೆ

ಮಡಿಕೇರಿ  :   ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಏಪ್ರಿಲ್, 08 ರಿಂದ 15 ರವರೆಗೆ 2026 ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1 ರ ಮೌಲ್ಯಮಾಪನ ನಡೆಯಲಿದ್ದು, ಮೌಲ್ಯಮಾಪನ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ಹೊರತುಪಡಿಸಿ ಈ ಮೌಲ್ಯಮಾಪನ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಮೌಲ್ಯಮಾಪನ ಕಾರ್ಯ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮೌಲ್ಯಮಾಪನ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

ಈ ಆದೇಶವು ಮೌಲ್ಯಮಾಪನ ನಡೆಸುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಏ.10 ರಂದು ತಲಕಾವೇರಿ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿರುವ ಶ್ರೀ ತಲಕಾವೇರಿ ದೇವಾಲಯದಲ್ಲಿ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಏಪ್ರಿಲ್, 10 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ.

ಏಪ್ರಿಲ್, 10 ರಂದು ಬೆಳಗ್ಗೆ 9 ಗಂಟೆಯಿಂದ ಗಣಪತಿ ಹೋಮ, ಪುಣ್ಯಾಹ, ಅಗಸ್ತ್ಯೇಶ್ವರ ಸಾನಿಧ್ಯದಲ್ಲಿ ಕಳಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಕಾವೇರಿ ಅಮ್ಮನವರಿಗೆ ಸಂಪ್ರೋಕ್ಷಣೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ.

ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಅವರು ಕೋರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular