HomeKarnatakaBIG NEWS: ಯೋಗೇಶ್ ಗೌಡ ಕೊಲೆ ಕೇಸ್ ತೀರ್ಪು ಇಂದು ಪ್ರಕಟ: ಶಾಸಕ ವಿನಯ್ ಕುಲಕರ್ಣಿ...

BIG NEWS: ಯೋಗೇಶ್ ಗೌಡ ಕೊಲೆ ಕೇಸ್ ತೀರ್ಪು ಇಂದು ಪ್ರಕಟ: ಶಾಸಕ ವಿನಯ್ ಕುಲಕರ್ಣಿ ಸೇರಿ 21 ಆರೋಪಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿರುವ ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಸುಮಾರು ಎಂಟು ವರ್ಷಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಅಂತಿಮ ಆದೇಶ ನೀಡಲಿದೆ. 2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಧಾರವಾಡ ಉಪನಗರ ಠಾಣೆ ಪೊಲೀಸರು ತನಿಖೆ ನಡೆಸಿ ಆಸ್ತಿ ವಿವಾದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.

ಯೋಗೇಶ್ ಗೌಡ ಕುಟುಂಬ ಸದಸ್ಯರ ಒತ್ತಾಯದ ಮೇರೆಗೆ 2019ರ ಸೆಪ್ಟೆಂಬರ್ ನಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದ್ದು, ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ತಿಳಿದುಬಂದಿತ್ತು. ವಿನಯ್ ಕುಲಕರ್ಣಿಯವರನ್ನು 2020ರ ನವೆಂಬರ್ 5ರಂದು ಸಿಬಿಐ ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular