HomeKarnatakaಶಿವಮೊಗ್ಗ ಬೊಮ್ಮನಕಟ್ಟೆಗೆ 'ಬಂಗಾರಪ್ಪ ಬಡಾವಣೆ' ಎಂದು ನಾಮಕರಣ: ಸರ್ಕಾರ ಆದೇಶ

ಶಿವಮೊಗ್ಗ ಬೊಮ್ಮನಕಟ್ಟೆಗೆ ‘ಬಂಗಾರಪ್ಪ ಬಡಾವಣೆ’ ಎಂದು ನಾಮಕರಣ: ಸರ್ಕಾರ ಆದೇಶ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯನ್ನು ಎಸ್. ಬಂಗಾರಪ್ಪ ಬಡಾವಣೆ ಎಂದು ನಾಮಕರಣ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಹೆಸರನ್ನು ಬಡಾವಣೆಗೆ ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ನಿವಾಸಿಗಳು, ಸಾರ್ವಜನಿಕರ ಒತ್ತಾಯದ ಮೇರೆಗೆ ಬಂಗಾರಪ್ಪ ಅವರ ಹೆಸರನ್ನು ಇಡುವಂತೆ ಕೋರಿ 2025ರ ಮೇನಲ್ಲಿ ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು.

ಇದಕ್ಕೆ ನಗರಾಭಿವೃದ್ಧಿ ಇಲಾಖೆ ಅನುಮೋದನೆ ನೀಡಿದ್ದು, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯನ್ನು ಎಸ್. ಬಂಗಾರಪ್ಪ ಬಡಾವಣೆ ಎಂದು ನಾಮಕರಣ ಮಾಡಿ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular