ಮೈಸೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದುದನ್ನು ತಡೆದಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕಾರ್ ನಲ್ಲಿ ಬಂದ ನಾಲ್ವರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಬಳಿ ಘಟನೆ ನಡೆದಿದೆ. ಹಿಂದೂ ಸಂಘಟನೆಯ ಯುವಕ ಚಂದ್ರಮೌಳಿ ಮೇಲೆ ಹಲ್ಲೆ ನಡೆಸಲಾಗಿದೆ. ಅನ್ಯಕೋಮಿನ ಯುವಕರು ಚಂದ್ರಮೌಳಿ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಚಂದ್ರಮೌಳಿಯನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

