HomeKarnataka'ವಂದೇ ಮಾತರಂ' 6 ಚರಣದೊಂದಿಗೆ ಕಡ್ಡಾಯ ಪ್ರಶ್ನಿಸಿದ್ಧ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

‘ವಂದೇ ಮಾತರಂ’ 6 ಚರಣದೊಂದಿಗೆ ಕಡ್ಡಾಯ ಪ್ರಶ್ನಿಸಿದ್ಧ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ ಗೀತೆಯನ್ನು ಎಲ್ಲಾ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತಾಗಿ ಬೆಂಗಳೂರಿನ ವಕೀಲ ಸೋಮಶೇಖರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರ ನಡೆದಿದೆ. ಕೇಂದ್ರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಮಾಹಿತಿ ನೀಡಿ, ಗೃಹ ಇಲಾಖೆ ಆದೇಶದಲ್ಲಿ ವಂದೇ ಮಾತರಂ ಹಾಡಬಹುದು ಎಂಬ ಪದ ಬಳಸಲಾಗಿದೆ. ಅದು ಕಡ್ಡಾಯವಲ್ಲ ಎಂಬುದನ್ನು ಸೂಚಿಸುತ್ತದೆ. ಅಲ್ಲದೇ ಇತ್ತೀಚಿಗೆ ಸುಪ್ರೀಂಕೋರ್ಟ್ ಇದೇ ರೀತಿಯ ಮನವಿ ಒಳಗೊಂಡಿದ್ದ ಪಿಐಎಲ್ ವಜಾಗೊಳಿಸಿದೆ ಎಂದು ನ್ಯಾಯ ಪೀಠದ ಗಮನಕ್ಕೆ ತಂದಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಪೀಠ ಪಿಎಎಲ್ ಅರ್ಜಿ ವಜಾಗೊಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular