ಕೊಪ್ಪಳ: ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ್ ಬಿ. ಇಟ್ನಾಳ ಅವರು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದಲ್ಲಿ ಗೇಟ್ ಗಳ ಫ್ಯಾಬ್ರಿಕೇಶನ್, ಬಿಚ್ಚುವಿಕೆ ಮತ್ತು ಅಳವಡಿಕೆ ಕಾಮಗಾರಿಯ ಪ್ರಸ್ತುತ ಸ್ಥಿತಿಗತಿ ಪರಿಶೀಲಿಸಿದ್ದಾರೆ.
ಜಲಾಶಯದ ಒಟ್ಟು 33 ಕ್ರಸ್ಟ್ ಗೇಟ್ ಗಳಲ್ಲಿ 32 ಕ್ರಸ್ಟಗೇಟ್ ಗಳ ಫ್ಯಾಬ್ರಿಕೇಶನ್ ಪೂರ್ಣಗೊಂಡಿದೆ. 1 ಗೇಟು ಫ್ಯಾಬ್ರಿಕೇಶನ್ ಹಂತದಲ್ಲಿದ್ದು, ಹೊಸಪೇಟೆ ಫ್ಯಾಬ್ರಿಕೇಶನ್ ಕೇಂದ್ರದಲ್ಲಿ ಕೆಲಸ ಪ್ರಗತಿಯಲ್ಲಿದೆ. ಗೇಟ್ ಸಂಖ್ಯೆ 1 ರಿಂದ 14 ಮತ್ತು 16 ರಿಂದ 33 ರವರೆಗಿನ ಒಟ್ಟು 32 ಗೇಟ್ಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದೆ. ಗೇಟ್ ಸಂಖ್ಯೆ 15 ರ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
20 ಗೇಟ್ಗಳ ಪ್ರಾಯೋಗಿಕ ಚಾಲನೆ ಪೂರ್ಣಗೊಂಡಿದೆ. 24 ಗೇಟ್ಗಳ ಅಳವಡಿಕೆ ಪೂರ್ಣಗೊಂಡಿದೆ. 7 ಗೇಟ್ ಗಳ ಕೆಲಸ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ಕೆ.ಎನ್.ಎನ್.ಎಲ್. ಮುಖ್ಯ ಎಂಜಿನಿಯರ್ ಶ್ರೀನಿವಾಸ ಮಲ್ಲಿಗವಾಡ, ಟಿಆರ್ ವಿಭಾಗದ ಇಇ ನಾಗನಾಥ, ಎಇಇ ಧರ್ಮರಾಜ್, ಟಿಬಿ ಬೋರ್ಡ್ ಇಇ ಚಂದ್ರಶೇಖರ, ಸೆಕ್ಷನ್ ಅಧಿಕಾರಿಗಳಾದ ಜಿ. ಕಿರಣ ಮತ್ತು ಪಂಪಾಪತಿ ಡಿ.ಕೆ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

