ಬೆಳಗಾವಿ: ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಅಡೆತಡೆ ಇಲ್ಲದೆ ಅವರ ಖಾತೆಗೆ ಜಮೆಯಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೆರೆ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಚುನಾವಣೆಯ ಹೊಸ್ತಿಲಲ್ಲಿ ಫಲಾನುಭವಿಗಳಿಗೆ ಮುಂಗಡ ಹಣ ಪಾವತಿಸುತ್ತಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಚುನಾವಣಾ ಆಯೋಗ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಮತದಾರರಿಗೆ ಹಣದ ಆಮಿಷವೊಡ್ಡಲಾಗುತ್ತಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಇದ್ದರೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳದಿರುವುದು ಆಯೋಗದ ವೈಫಲ್ಯ ತೋರಿಸುತ್ತದೆ ಎಂದು ಹೇಳಿದ್ದಾರೆ.
ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಪ್ರತಿ ತಿಂಗಳು ಯಾವುದೇ ಆಡೆತಡೆ ಇಲ್ಲದೆ ಯೋಜನೆಯ ಹಣವನ್ನು ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

