HomeKarnatakaLokayukta Raid : ರಾಯಚೂರಲ್ಲಿ 1 ಲಕ್ಷ ಲಂಚ ಪಡೆದು ಓಡಿದ ಅಧಿಕಾರಿ ; ಚೇಸ್...

Lokayukta Raid : ರಾಯಚೂರಲ್ಲಿ 1 ಲಕ್ಷ ಲಂಚ ಪಡೆದು ಓಡಿದ ಅಧಿಕಾರಿ ; ಚೇಸ್ ಮಾಡಿ ಹಿಡಿದ ಲೋಕಾಯುಕ್ತ.!

ರಾಯಚೂರು ಜಿಲ್ಲೆಯ ಸಿರಿವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ (CO) 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರರೊಬ್ಬರ ಬಾಕಿ ಬಿಲ್ ಬಿಡುಗಡೆ ಮಾಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಅಧಿಕಾರಿಯನ್ನು  ರೆಡ್‌ಹ್ಯಾಂಡ್ ಆಗಿ ಹಿಡಿದಿರುವ ಪೊಲೀಸರು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

ಸಿರಿವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ (Chief Officer) ಸುರೇಶ್ ಶೆಟ್ಟಿ  ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟವರು. 1 ಲಕ್ಷ ರೂಪಾಯಿ ನಗದನ್ನು ಲಂಚವಾಗಿ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಬಂದಿದ್ದಾರೆ. ಇದನ್ನು ನೋಡಿದ  ಸುರೇಶ್ ಶೆಟ್ಟಿ  ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಚೇಸ್ ಮಾಡಿದ ಅಧಿಕಾರಿಗಳು ಲಂಚಕೋರನನ್ನು ಹಿಡಿದಿದ್ದಾರೆ.  ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳ ಬಿಲ್ ಪಾಸ್ ಮಾಡಲು ಮತ್ತು ಇತರ ಸೌಲಭ್ಯಗಳ ವಿಲೇವಾರಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.

ಘಟನೆಯ ವಿವರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುತ್ತಿಗೆದಾರರೊಬ್ಬರಿಂದ ಬಾಕಿ ಇದ್ದ ಬಿಲ್ ಬಿಡುಗಡೆ ಮಾಡಲು ಸುರೇಶ್ ಶೆಟ್ಟಿ   ಅವರು ಹಣಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಸಂತ್ರಸ್ತರು ರಾಯಚೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ ಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ, ಮುಖ್ಯಾಧಿಕಾರಿ ಕಚೇರಿಯಲ್ಲಿ 1 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗಲೇ ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ.ಪ್ರಸ್ತುತ ಅಧಿಕಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಾಳಿ ವೇಳೆ ಕಚೇರಿಯಲ್ಲಿದ್ದ ಹಲವು ಮಹತ್ವದ ದಾಖಲೆಗಳನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular