HomeKarnatakaಎಸ್.ಎಸ್.ಎಲ್.ಸಿ ತೃತೀಯ ಭಾಷಾ ಪರೀಕ್ಷೆಗೆ ಗ್ರೇಡ್ ನೀಡುವ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ: ಅರ್ಜಿ...

ಎಸ್.ಎಸ್.ಎಲ್.ಸಿ ತೃತೀಯ ಭಾಷಾ ಪರೀಕ್ಷೆಗೆ ಗ್ರೇಡ್ ನೀಡುವ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ: ಅರ್ಜಿ ದಾರರಿಗೆ 1 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಎಸ್.ಎಸ್.ಎಲ್.ಸಿ ತೃತೀಯ ಭಾಷಾ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ನ್ನು ಹೈಕೋರ್ಟ್ ವಜಾಗೊಳಿಸಿದೆ.

ಅರ್ಜಿದಾರರು ಅಧಿಕೃತ ದಾಖಲೆಗಳ ಬದಲು ಪತ್ರಿಕಾ ವರದಿಗಳನ್ನು ಅವಲಂಬಿಸಿದ್ದಕ್ಕಾಗಿ ಅವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಬಿಗ್​​ ಶಾಕ್​​ ನೀಡಿದೆ.

ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಅರ್ಜಿದಾರರಾದ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್​​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್​​, ಪಿಐಎಲ್ ವಜಾಗೊಳಿಸಿ ಆದೇಶಿಸಿದೆ.

ಎಸ್.ಎಸ್.ಎಲ್.ಸಿ ತೃತೀಯ ಭಾಷೆಗಳ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿದ್ದವಾದರೂ, ಬಿಜೆಪಿಯ ಕೆಲವು ನಾಯಕರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸ್ವತಃ ಮಧ್ಯಪ್ರವೇಶ ಮಾಡಿದ್ದ ರಾಜ್ಯಪಾಲರು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲನೀಶ್​​ಗೆ ಪತ್ರ ಕೂಡ ಬರೆದಿದ್ದರು. ಗವರ್ನರ್​​ ಈ ನಡೆ ವಿರುದ್ಧ ಸಿಡಿದೆದ್ದಿದ್ದ ಕರವೇ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ ಎಂದು ಕಿಡಿಕಾರಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular