HomeLatest Newsಮಿಲಿಟರಿ ಬಾಲಕಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಿಲಿಟರಿ ಬಾಲಕಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ :   ಧಾರವಾಡದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಬಳ್ಳಾರಿ ಜಿಲ್ಲೆಯ ಹೆಣ್ಣು ಮಕ್ಕಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

5 ನೇ ತರಗತಿಯಿಂದ ಪಿಯುಸಿ-2 ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅರ್ಹರಾಗಿರುತ್ತಾರೆ. ಧಾರವಾಡ ನಗರದ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ಈ ವಸತಿ ನಿಲಯದಲ್ಲಿ ಅವಕಾಶವಿರುತ್ತದೆ. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯು ಸಂಪೂರ್ಣ ಉಚಿತವಾಗಿರುತ್ತದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೇಲ್ ಸರ್ಕಲ್, ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ. (ದೂ.0836-2440176) ಈ ವಿಳಾಸಕ್ಕೆ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಮೇ 05 ರೊಳಗಾಗಿ ಸಲ್ಲಿಸಬಹುದಾಗಿದೆ. ಮಾಜಿ ಸೈನಿಕರ ಮಕ್ಕಳು ಈ ಸೌಲಭ್ಯದ ಸದುಪಯೋಗಪಡೆದುಕೊಳ್ಳಬೇಕು ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತೋತ್ಸವ

ಭಾರತ ಸಂವಿಧಾನದ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮವನ್ನು ಏ.14 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಗಣ್ಯರಿಂದ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಾಗುವುದು.

ಬಳಿಕ ಬೆಳಿಗ್ಗೆ 09.30 ಗಂಟೆಗೆ ಮುನ್ಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ಆರಂಭವಾಗಲಿದೆ. ಈ ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹೆಚ್.ಗವಿಯಪ್ಪ ವೃತ್ತ ಹಾಗೂ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗವಾಗಿ ಸಾಗಿ ಪುನಃ ಮುನ್ಸಿಪಲ್ ಕಾಲೇಜು ಮೈದಾನಕ್ಕೆ ತಲುಪಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಸ್ತ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯಂತೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular