HomeKarnatakaBIG NEWS: ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್ ಧಾರವಾಡ ಪೀಠ​ ಅನುಮತಿ: ಷರತ್ತುಗಳು ಅನ್ವಯ

BIG NEWS: ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್ ಧಾರವಾಡ ಪೀಠ​ ಅನುಮತಿ: ಷರತ್ತುಗಳು ಅನ್ವಯ

ಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ನಡೆಸುತ್ತಿರುವ ಹೋರಾಟಕ್ಕೆ ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.

ಉದ್ಯೋಗಾಕಾಂಕ್ಷಿಗಳು ಈ ಹಿಂದೆ ನಡೆಸಿದ್ದ ಪ್ರತಿಭಟನೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದರಿಂದ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಏಪ್ರಿಲ್​​ 8ರಂದು ಧಾರವಾಡ ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್​​ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾ.ಅಶೋಕ ಕಿನಗಿ ಅವರಿದ್ದ ಏಕ ಸದಸ್ಯ ಪೀಠ ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಅದರ ಪ್ರಕಾರ 100 ಜನರಿಗೆ ಮಾತ್ರ ಹೋರಾಟಕ್ಕೆ ಅನುಮತಿ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಪಾಲನೆ ಸೇರಿದಂತೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಕೋರ್ಟ್ ವಿಧಿಸಿರುವ ಷರತ್ತುಗಳು:

ನೆಹರು ಮೈದಾನದಲ್ಲಿ 100 ಜನರಿಗೆ ನಾತ್ರ ಪ್ರತಿಭಟನೆಗೆ ಅವಕಾಶ
ಪ್ರತಿಭಟನೆ ಮಾಡುವವರ ಕುರಿತ ಮಾಹಿತಿಯನ್ನು ಇಲಾಖೆಗೆ ನೀಡಬೇಕು
ಪ್ರತಿಭಟನೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವಂತವರು ಇರಬಾರದು
ಯಾವುದೇ ಕಾರಣಕ್ಕೂ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ಪ್ರತಿಭಟಿಸಬೇಕು
ಅರ್ಜಿಯೊಂದಿಗೆ ನೀಡಿದ ಪಟ್ಟಿಯಲ್ಲಿರುವವರು ಮಾತ್ರ ಭಾಗವಹಿಸಬೇಕು
ಲಿಸ್ಟ್​​ನಲ್ಲಿ ಇಲ್ಲದವರು ಪ್ರತಿಭಟನೆಯಲ್ಲಿ ಭಾಗವಹಿಸುವಂತಿಲ್ಲ

ಇನ್ನು ಕೋರ್ಟ್​​ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಈ ಹಿಂದೆ ಕೆಲ ಅಹಿತಕರ ಘಟನೆಗಳು ನಡೆದಿರುವ ಕಾರಣ ಪ್ರತಿಭಟನೆಗೆ ನಾವು ಅನುಮತಿ ನೀಡಿರಲಿಲ್ಲ. ಆದರೆ ಸಂಘಟನೆಯವರು ಕೋರ್ಟ್​​ ಮೊರೆ ಹೋಗಿದ್ದು, ಈ ಸಂಬಂಧ ನಮಗೆ ಉತ್ತರಿಸಲು ಹೈಕೋರ್ಟ್ ಎರಡು ದಿನಗಳ ಕಾಲಾವಕಾಶ ನೀಡಿತ್ತು. ಅದರಂತೆ ನಾವು ವಿವರವಾದ ಮಾಹಿತಿಯನ್ನು ನೀಡಿದ್ದೆವು. ಅದರಂತೆ ಕೆಲ ಷರತ್ತುಗಳ ಜೊತೆ ಸಂಘಟನೆಗೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶವನ್ನು ಕೋರ್ಟ್​​ ನೀಡಿದೆ ಹಿಂದಿನ 2 ಪ್ರತಿಭಟನೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಕಳೆದ ಬಾರಿ ನಡೆದ ಪ್ರತಿಭಟನೆಯಲ್ಲಿ 17 ಸಿಬ್ಬಂದಿಗೆ ಗಾಯಗಳಾಗಿದ್ದವು. ಈ ಬಗ್ಗೆ 6 ಪ್ರಕರಣಗಲು ದಾಖಲಾಗಿದ್ದವು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular