ಬೆಂಗಳೂರು: ಈ ಬಾರಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸರ್ಕಾರಿ ವಸತಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ನೀಡಿದ್ದಾರೆ. ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್ಇಇಟಿ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಸಮಾಜಕಲ್ಯಾಣ ಸಚಿವ ಹೆಚ್ಸಿ ಮಹದೇವಪ್ಪ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಹದೇವಪ್ಪ, ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಹಳ್ಳಿ ಮಕ್ಕಳು ಹೆಚ್ಚು ಪಾಸಾಗಿದ್ದಾರೆ, ಅದರಲ್ಲೂ ಹೆಣ್ಣು ಮಕ್ಕಳು ಹೆಚ್ಚು ಸಾಧನೆ ಮಾಡಿದ್ದಾರೆ. ಇದು ಬಹಳ ಸಂತೋಷ. ವಸತಿ ಶಾಲೆಗಳಲ್ಲಿ ಈ ಬಾರಿ ಹೆಚ್ಚಿನ ರಿಸಲ್ಟ್ ಬಂದಿದೆ ಎಂದು ಹೇಳಿದರು.
ರಾಜ್ಯದಲ್ಲಿ 539 ಎಸ್ಸಿ, 156 ಎಸ್ಟಿ ಮತ್ತು 179 ಹಿಂದುಳಿದ ವರ್ಗಗಳ ವಸತಿ ಶಾಲೆಗಳಿವೆ. ವಿಜ್ಞಾನ ವಿಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತ್ ಭೀಮಪ್ಪ 598 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ವಸತಿ ಶಾಲೆಗಳಲ್ಲಿ ಓದಿದ 2,321 ಮಕ್ಕಳು ಡಿಸ್ಟಿಂಕ್ಷನ್, 2487 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ನಲ್ಲಿ ಪಾಸ್ ಆಗಿದ್ದಾರೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್ಇಇಟಿ, ನೀಟ್ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ತಿಳಿಸಿದ್ದಾರೆ.

