HomeKarnatakaಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಹತ್ಯೆ: ತಂದೆ, ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಹತ್ಯೆ: ತಂದೆ, ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಶಿರಸಿ: ಮಲತಾಯಿ ಮಗ ಆಸ್ತಿಯಲ್ಲಿ ಬಾಲು ಕೇಳಿದ್ದಕ್ಕೆ ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಶಿರಸಿಯ ಒಂದನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಅಪ್ಪ, ಮಲತಾಯಿ ಮತ್ತು ಮಲತಾಯಿಯ ಮಗನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪಾಂಡುರಂಗ ಕಿತ್ತೂರಕರ, ಲತಾ ಪಾಂಡುರಂಗ ಕಿತ್ತೂರಕರ ಮತ್ತು ಅಕ್ಷಯ ಪಾಂಡುರಂಗ ಕಿತ್ತೂರಕರ ಶಿಕ್ಷೆಗೆ ಒಳಗಾದವರು. ಕೇಶವ ಪಾಂಡುರಂಗ ಕಿತ್ತೂರಕರ ಅವರನ್ನು ಹತ್ಯೆ ಮಾಡಿದ್ದರು. 2019ರ ಅಕ್ಟೋಬರ್ 15ರಂದು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಬಿದ್ರಳ್ಳಿ ಗ್ರಾಮದಲ್ಲಿ ಕೊಲೆ ಮಾಡಿದ್ದರು. ಪೊಲೀಸರು ಪ್ರಕರಣದ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular