HomeKarnatakaಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಅಪರಾಧಿಗೆ ಶಿಕ್ಷೆ

ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಅಪರಾಧಿಗೆ ಶಿಕ್ಷೆ

ಕೊಪ್ಪಳ: ‎ಬುಕನಟ್ಟಿ ಗ್ರಾಮದ ಖಾದರಸಾಬ ಓಲೇಕಾರ ಎಂಬ ವ್ಯಕ್ತಿಯು 2023ರ ನವೆಂಬರ್ 14 ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪವು ಸಾಬೀತಾಗಿದ್ದು, ಕೊಪ್ಪಳ ‎ಹೆಚ್ಚುವರಿ ಜಿಲ್ಲಾ  ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ(ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಏಪ್ರಿಲ್ 2 ರಂದು ಅಪರಾಧಿಗೆ ಶಿಕ್ಷೆ ವಿಧಿಸಿರುತ್ತಾರೆ. 

‎ಅಪ್ರಾಪ್ತೆ ಬಾಲಕಿಯ ತಂದೆಯು ಬಾಲಕಿಯನ್ನು ಕರೆದುಕೊಂಡು ಉಪಜೀವನಕ್ಕಾಗಿ ಉಡುಪಿಗೆ ಹೋಗಿ ವಾಸವಾಗಿರುತ್ತಾರೆ. ಅವರ ಮನೆಯ ಹತ್ತಿರದಲ್ಲಿ ವಾಸವಾಗಿದ್ದ ಖಾದರಬಾಷಾ(ಖಾದರಸಾಬ ಓಲೇಕಾರ) ಬಾಲಕಿಗೆ ಪರಿಚಯ ಮಾಡಿಕೊಂಡು ಸಲುಗೆಯಿಂದ ಮಾತನಾಡಿದ್ದ.

ಬಾಲಕಿ ತನ್ನ ತಂದೆ ತಾಯಿಯೊಂದಿಗೆ ತಮ್ಮ ಊರಿಗೆ ಬಂದಾಗ ಅಪರಾಧಿಯು 2023ರ ನವೆಂಬರ್ 14ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕಿಗೆ ಮೋಟಾರ್ ಸೈಕಲ್ ಮೇಲೆ ಕೂಡಿಸಿಕೊಂಡು ಬಸರಿಹಾಳ ಸೀಮಾದ ಒಂದು ಹೊಲದಲ್ಲಿ ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತದನಂತರದಲ್ಲಿ ಮೈಸೂರಿಗೆ ಕರೆದುಕೊಂಡು ಹೋಗಿ ದೊಡ್ಡ ಕನ್ನೆ ಗ್ರಾಮದ ತೋಟದ ಶೆಡ್ ನಲ್ಲಿ ಹಲವಾರು ಸಲ ಅತ್ಯಾಚಾರ ಎಸಗಿದ್ದ. ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಎಚ್. ಇವರು ಬಾಧಿತಳ ತಂದೆ ನೀಡಿದ ದೂರನ್ನು ಸ್ವೀಕರಿಸಿ ಪ್ರಥಮ ಹಂತದ ತನಿಖೆಯನ್ನು ನಿರ್ವಹಿಸಿ ಮುಂದಿನ ತನಿಖೆಯನ್ನು ಕೊಪ್ಪಳ ವೃತ್ತ ಸಿಪಿಐ ಸುರೇಶ್ ಡಿ. ಇವರು ನಿರ್ವಹಿಸಿ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವು ಸ್ಪೇ.ಎಸ್‌ಸಿ (ಪೋಕ್ಸೊ) ಸಂ: 31/2024 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ. 75,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿದೆ.

ಕೊಪ್ಪಳ ‎ಹೆಚ್ಚುವರಿ ಜಿಲ್ಲಾ  ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ(ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಏಪ್ರಿಲ್ 2 ರಂದು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು.

ಮುನಿರಾಬಾದ್ ಪೊಲೀಸ್ ಠಾಣೆಯ ಸಿಬ್ಬಂದಿ ಅಮರೇಶ ಕಲಕೇರಿ ಹಾಗೂ ಹನುಮಂತಪ್ಪ ಭಜಂತ್ರಿ ಇವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular