ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯ (CET) ಪ್ರವೇಶ ಪತ್ರಗಳನ್ನು ಅಧಿಕೃತವಾಗಿ ಪ್ರಕಟಿಸಿದೆ.
ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಬಹುನಿರೀಕ್ಷಿತ CET-2026 ಪರೀಕ್ಷೆಯ ಪ್ರವೇಶ ಪತ್ರವನ್ನು (Admit Card) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಏಪ್ರಿಲ್ 23 ಮತ್ತು 24 ರಂದು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪರೀಕ್ಷೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಇಂದಿನಿಂದಲೇ ಆನ್‌ಲೈನ್ ಮೂಲಕ ತಮ್ಮ ಹಾಲ್‌ಟಿಕೆಟ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಪರೀಕ್ಷಾ ವೇಳಾಪಟ್ಟಿ:
- ಕನ್ನಡ ಭಾಷಾ ಪರೀಕ್ಷೆ: ಏಪ್ರಿಲ್ 22, 2026 (ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಮಾತ್ರ).
- ಸಾಮಾನ್ಯ ಪ್ರವೇಶ ಪರೀಕ್ಷೆ (CET): ಏಪ್ರಿಲ್ 23 ಮತ್ತು ಏಪ್ರಿಲ್ 24, 2026.
ಕನ್ನಡ ಭಾಷಾ ಪರೀಕ್ಷಾ ಕೇಂದ್ರಗಳು
ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಈ ಕೆಳಗಿನ ಮೂರು ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ:
- ಬೆಂಗಳೂರು
- ಬೆಳಗಾವಿ
- ಮಂಗಳೂರು
ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?
ಅರ್ಜಿ ಸಲ್ಲಿಸಿ, ನಿಗದಿತ ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ನಿಂದ ಪ್ರವೇಶ ಪತ್ರವನ್ನು ಪಡೆಯಬಹುದು.
ಅಭ್ಯರ್ಥಿಗಳಿಗೆ ಪ್ರಮುಖಸೂಚನೆಗಳು:
- ಸೂಚನೆಗಳ ಡೌನ್‌ಲೋಡ್: ಪ್ರವೇಶ ಪತ್ರದ ಜೊತೆಗೆ ನೀಡಿರುವ ಸೂಚನಾ ಪತ್ರವನ್ನೂ ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಳ್ಳಿ.
- ಮಾರ್ಗಸೂಚಿ ಪಾಲನೆ: ಪರೀಕ್ಷಾ ಕೊಠಡಿಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನಗಳನ್ನು ಮತ್ತು ಮಾರ್ಗದರ್ಶನಗಳನ್ನು ತಪ್ಪದೇ ಓದಿಕೊಂಡು ಪಾಲಿಸಿ.

