HomeLatest NewsBREAKING : ಹಣಕ್ಕಾಗಿ ಪ್ರಧಾನಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ರವಾನೆ : ಬಿಹಾರದ ಯುವಕ...

BREAKING : ಹಣಕ್ಕಾಗಿ ಪ್ರಧಾನಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ರವಾನೆ : ಬಿಹಾರದ ಯುವಕ ಅರೆಸ್ಟ್.!

ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೆ ಧಕ್ಕೆ ತರುವಂತಹ ಮತ್ತು ಅವರ ಕಚೇರಿಗೆ (PMO) ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ವಿದೇಶಿ ಸಂಸ್ಥೆಗಳಿಗೆ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಬಿಹಾರದ ಬಕ್ಸರ್ ಜಿಲ್ಲೆಯ ಯುವಕನನ್ನು ಬಂಧಿಸಲಾಗಿದೆ.

ಬಂಧಿತನನ್ನು ಸಿಮ್ರಿ ಪ್ರದೇಶದ ಅಮಲ್ ಕುಮಾರ್ ತಿವಾರಿ ಎಂದು ಗುರುತಿಸಲಾಗಿದೆ.ಈತ ಅಮೆರಿಕದ ಗುಪ್ತಚರ ಸಂಸ್ಥೆಯಾದ CIA (ಸಿಐಎ) ಗೆ ಸಂದೇಶ ಕಳುಹಿಸಿದ್ದಲ್ಲದೆ, ಡಾರ್ಕ್ ವೆಬ್ ಮೂಲಕ ವಿದೇಶಿ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದ. ಪ್ರಧಾನಿ ಮತ್ತು ಅವರ ಕಚೇರಿಗೆ ಸಂಬಂಧಿಸಿದ ನಿರ್ಣಾಯಕ ಮಾಹಿತಿಯನ್ನು ನೀಡಲು ಪ್ರತಿಯಾಗಿ ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದ.

ವಶಪಡಿಸಿಕೊಂಡ ವಸ್ತುಗಳು : ಪೊಲೀಸರು ಆತನ ಬಳಿಯಿದ್ದ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆತನ ಫೋನ್‌ನಲ್ಲಿ ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (VPN) ಮತ್ತು ಡಾರ್ಕ್ ವೆಬ್ ಪ್ರವೇಶಿಸಲು ಬಳಸುವ ಆ್ಯಪ್‌ಗಳು ಪತ್ತೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿನ್ನೆಲೆ : ವಿಚಾರಣೆಯ ವೇಳೆ ಈತ ಈ ಹಿಂದೆ ಕೋಲ್ಕತ್ತಾ ವಿಮಾನ ನಿಲ್ದಾಣದ ವೆಬ್‌ಸೈಟ್ ಹ್ಯಾಕ್ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲೂ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.ಸದ್ಯ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಈ ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular