HomeIPL 2026IPL 2026: ತಮ್ಮನ್ನು ಹೀನಾಯವಾಗಿ ಸೋಲಿಸಿದ ವೈಭವ್ ಸೂರ್ಯವಂಶಿ ಆಟಕ್ಕೆ ಮೆಚ್ಚಿ ಗಿಫ್ಟ್ ಕೊಟ್ಟ ವಿರಾಟ್...

IPL 2026: ತಮ್ಮನ್ನು ಹೀನಾಯವಾಗಿ ಸೋಲಿಸಿದ ವೈಭವ್ ಸೂರ್ಯವಂಶಿ ಆಟಕ್ಕೆ ಮೆಚ್ಚಿ ಗಿಫ್ಟ್ ಕೊಟ್ಟ ವಿರಾಟ್ ಕೊಹ್ಲಿ; ವಿಡಿಯೊ

ನಿನ್ನೆ ( ಏಪ್ರಿಲ್ 10 ) ಬರ್ಸಾಪರ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಹೀನಾಯ ಸೋಲುಣಿಸಿತು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಆಘಾತ ಅನುಭವಿಸಿ ನಾಯಕ ರಜತ್ ಪಟಿದಾರ್ ಅರ್ಧಶತಕ, ಶೆಫರ್ಡ್ ಹಾಗೂ ವೆಂಕಟೇಶ್ ಐಯ್ಯರ್ ಉತ್ತಮ ಆಟದ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 202 ರನ್‌ಗಳ ಸವಾಲಿನ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೆಲ್ ಅರ್ಧಶತಕಗಳ ನೆರವಿನಿಂದ 18 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಕಲೆಹಾಕಿತು.

ಆರ್‌ಸಿಬಿ ನೀಡಿದ ಸವಾಲಿನ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅಬ್ಬರಿಸಿದರು. ಮೊದಲನೇ ಓವರ್‌ನಲ್ಲಿ ಅನುಭವಿ ಭುನವೇಶ್ವರ್ ಕುಮಾರ್‌ಗೆ ಎರಡು ಬೌಂಡರಿ ಚಚ್ಚಿದ ಈತ ಎರಡನೇ ಓವರ್‌ನಲ್ಲಿ ಜೈಸ್ವಾಲ್ ವಿಕೆಟ್ ಬಿದ್ದರೂ ಬಿಡದೇ ಮೂರನೇ ಓವರ್‌ನಲ್ಲಿ ಹೇಜಲ್‌ವುಡ್‌ಗೆ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ಬಾರಿಸಿ ಅಬ್ಬರಿಸಿ ಒಟ್ಟಾರೆ ತಮ್ಮ ಅಮೋಘ ಇನ್ನಿಂಗ್ಸ್‌ನಲ್ಲಿ 26 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 78 ರನ್ ಚಚ್ಚಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಇನ್ನಿಂಗ್ಸ್ ಮೂಲಕ ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ವೈಭವ್ ಆರೆಂಜ್ ಕ್ಯಾಪನ್ನೂ ಸಹ ಪಡೆದುಕೊಂಡರು. ಹೀಗೆ ಆರೆಂಜ್ ಕ್ಯಾಪ್ ಹಾಗೂ ಪಂದ್ಯಶ್ರೇಷ್ಠ ಪ್ರಶಸ್ತಿ ಎರಡನ್ನೂ ಸಹ ಮುಂದಿಟ್ಟುಕೊಂಡು ವಿಡಿಯೊಗೆ ಪೋಸ್ ಕೊಟ್ಟಿರುವ ವೈಭವ್ ವಿರಾಟ್ ಕೊಹ್ಲಿಯಿಂದ ತನಗೆ ಸಿಕ್ಕ ವಿಶೇಷ ಉಡುಗೊರೆಯನ್ನೂ ಸಹ ಹಂಚಿಕೊಂಡಿದ್ದಾರೆ.

ಹೌದು, ವಿರಾಟ್ ಕೊಹ್ಲಿ ವೈಭವ್ ಸೂರ್ಯವಂಶಿ ಕ್ಯಾಪ್ ಮೇಲೆ ‘ಡಿಯರ್ ವೈಭವ್ ವೆಲ್‌ಡನ್’ ಎಂದು ಬರೆದು ಸಹಿ ಹಾಕಿ ಕೊಟ್ಟಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular