ಬೆಂಗಳೂರು : ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯನ್ನು ಏಪ್ರಿಲ್ 16ರಂದು ಕರೆಯಲಾಗಿದೆ. ಅಂದು ಸಂಜೆ 4:30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದ್ದು, ರಾಜ್ಯದ ಹಲವು ಪ್ರಮುಖ ನಿರ್ಧಾರಗಳಿಗೆ ಅನುಮೋದನೆ ಸಿಗುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರವು ಏಪ್ರಿಲ್ 16ರಂದು ಗುರುವಾರ ಮಹತ್ವದ ಕ್ಯಾಬಿನೆಟ್ ಮೀಟಿಂಗ್ ನಿಗದಿಪಡಿಸಿದೆ. ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ಈ ಕುರಿತು ಅಧಿಕೃತ ಸೂಚನಾ ಪತ್ರ ಹೊರಡಿಸಿದ್ದು, ಸಭೆಯ ಕಾರ್ಯಸೂಚಿಯನ್ನು ಶೀಘ್ರದಲ್ಲೇ ಸಚಿವರಿಗೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಗಳು ಕುತೂಹಲ ಮೂಡಿಸಿವೆ.


