ಲಖನೌ: ವಾಕಿಂಗ್ ಗೆ ತೆರಳಿದ್ದ ವಕೋಲರೊಬ್ಬರನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
45 ವರ್ಷದ ರಾಜೀವ್ ಸಿಂಗ್ ಕೊಲೆಯಾದ ವಕೀಲ. ಶೂಟೌಟ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಜೀವ್ ಸಿಂಗ್ ಎಂದಿನಂತೆ ಬೆಳಿಗ್ಗೆ ವಾಕಿಂಗ್ ಹೋಗಿದ್ದರು. ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ವಕೀಲನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿಗೆ ವಕೀಲ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಎಸ್ಕೇಪ್ ಆಗುವಾಗ ದುಷ್ಕರ್ಮಿಗಳ ಬೈಕ್ ಸ್ಟಾರ್ಟ್ ಆಗದೇ ಪೇಚಿಗೆ ಸಿಲುಕಿದ್ದಾರೆ. ಈ ವೇಳೆ ಸ್ಥಳೀಯರು ದಾಳಿಕೋರರನ್ನು ಹಿಡಿಯಲು ಓಡಿ ಬರುತ್ತಿದ್ದಂತೆ ದುಷ್ಕರ್ಮಿಗಳ ಬೈಕ್ ಸ್ಟಾರ್ತ್ ಆಗಿದ್ದು ಸ್ಥಳದಿಂದ ಪರಾರಿಯಾಗಿದ್ದಾರೆ.
ರಾಜೀವ್ ಸಿಂಗ್ ಕೆಲ ದಿನಗಳ ಹಿಂದೆ ತನ್ನ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಆತಂಕಗೊಂಡಿದರು ಎಂದು ತಿಳಿದಿಬಂದಿದೆ. ಸ್ಥಳಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

