HomeKarnatakaBREAKING: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

BREAKING: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.

ಕಾಫಿ ತೋಟದಲ್ಲಿ ಬಾಳೆ ಹಾಳೆಯ ಮೇಲೆ ನವಜಾತ ಶಿಶುವನ್ನು ಮಲಗಿಸಿ ಹೋಗಿದ್ದಾರೆ. ಇದನ್ನು ಕಂಡ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಗುವನ್ನು ರಕ್ಷಿಸಿ ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಕರೆದೊಯ್ದು ಆರೈಕೆ ಮಾಡುತ್ತಿದ್ದಾರೆ.

ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ಪೋಷಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular