HomeLatest Newsರೈತರಿಂದ ಕಡಿಮೆ ಬೆಲೆಗೆ ಜಮೀನು ಪಡೆದು ಅಸ್ತಿತ್ವದಲ್ಲಿಲ್ಲದ ಕಂಪೆನಿಗೆ ಹಸ್ತಾಂತರ: ಕೆಐಎಡಿಬಿ ಅಧಿಕಾರಿಗಳು, ಕಂಪೆನಿಯ ವಿರುದ್ಧ...

ರೈತರಿಂದ ಕಡಿಮೆ ಬೆಲೆಗೆ ಜಮೀನು ಪಡೆದು ಅಸ್ತಿತ್ವದಲ್ಲಿಲ್ಲದ ಕಂಪೆನಿಗೆ ಹಸ್ತಾಂತರ: ಕೆಐಎಡಿಬಿ ಅಧಿಕಾರಿಗಳು, ಕಂಪೆನಿಯ ವಿರುದ್ಧ CBI ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ರೈತರಿಂದ ಕಡಿಮೆ ಬೆಲೆಗೆ ಜಮೀನು ಪಡೆದು ಅಸ್ತಿತ್ವದಲ್ಲಿಯೇ ಇಲ್ಲದ ಕಂಪೆನಿಗೆ ಹಸ್ತಾಂತರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಅಧಿಕಾರಿಗಳು, ಕಂಪೆನಿಯ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ.

ಹೆಬ್ಬಾಳ ಹಾಗೂ ಅಮಾನಿಕೆರೆ ಹೆಬ್ಬಾಳ ಗ್ರಾಮಗಳಲ್ಲಿ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮ(ಕೆಐಎಡಿಬಿ)ದಿಂದ ಸುಮಾರು 55 ಎಕರೆ ಭೂಸ್ವಾಧೀನದಲ್ಲಿ ಭಾರಿ ವಂಚನೆ ನಡೆದಿರುವ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್‌, ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಲೆಕ್ ವ್ಯೂವ್‌ ಟೂರಿಸಂ ಕಾರ್ಪೊರೇಶನ್ ಎಂಬ ಸಂಸ್ಥೆ ನಿರ್ದೇಶಕರ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೂಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಭೂಮಾಲೀಕರಾದ ಕೃಷ್ಣಾ ರೆಡ್ಡಿ ಅವರ ಸಂಬಂಧಿಕರು, ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್‌ ಮತ್ತು ನ್ಯಾಯಮೂರ್ತಿ ತಾರಾ ವಿತಸ್ಥ ಗಂಜಿ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಅಸ್ತಿತ್ವದಲ್ಲೇ ಇಲ್ಲದ ಹಾಗೂ 2011ರಲ್ಲಿ ಸ್ಥಾಪನೆಯಾಗಿದ್ದ ಸಂಸ್ಥೆಯ ಹೆಸರಿನಲ್ಲಿ ಭೂಸ್ವಾಧೀನ ಮಾಡಿರುವುದು ಸರ್ಕಾರಿ ಅಧಿಕಾರಿಗಳಿಂದ ನಡೆದ ದೊಡ್ಡಮಟ್ಟದ ವಂಚನೆಯಾಗಿದೆ. ಇದು ಅಧಿಕಾರಿಗಳು ಮತ್ತು ಖಾಸಗಿ ವ್ಯಕ್ತಿಗಳ ನಡುವೆ ನಡೆದ ಕ್ರಿಮಿನಲ್ ಸಂಚು ಆಗಿದೆ. ಜೊತೆಗೆ, ಅಸ್ತಿತ್ವದಲ್ಲಿದ್ದ ಸಂಸ್ಥೆಯ ಸೂಚನೆಯ ಮೇರೆಗೆ ಭೂಮಾಲೀಕರ ಅಮೂಲ್ಯವಾದ ಆಸ್ತಿಯನ್ನು ಅಲ್ಪ ಪರಿಹಾರಕ್ಕೆ ಕಳೆದುಕೊಳ್ಳುವಂತೆ ಮಾಡಲಾಗಿದೆ. ಈ ಪ್ರಕ್ರಿಯೆ ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಎಂದಿರುವ ಹೈಕೋರ್ಟ್​, ಇಡೀ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಿ, ಲೇಕ್​ ವ್ಯೂವ್‌ ಟೂರಿಸಂ ಕಾರ್ಪೊರೇಶನ್​ಗೆ 10 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

2022-23ರ ಹಣಕಾಸು ವರ್ಷದ ನಿರ್ದೇಶಕರ ಕಚೇರಿ ವರದಿಯಲ್ಲಿ ಕಂಪೆನಿಯು ಯಾವುದೇ ಕಾರ್ಯಸಾಧ್ಯವಾದ ವ್ಯಾಪಾರ ಅವಕಾಶಗಳನ್ನು ಗುರುತಿಸುವ ಮತ್ತು ಅದರ ಪ್ರಮುಖ ವ್ಯವಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸುವ ಪ್ರಕ್ರಿಯೆಯಲ್ಲಿತ್ತು ಎಂಬ ಅಂಶ ಗೊತ್ತಾಗಿದೆ. ಆದ್ದರಿಂದ ಈ ಪ್ರಸ್ತಾವಿತ ಕಂಪೆನಿಗೆ ಜಮೀನು ಸ್ವಾಧೀನಪಡಿಸಿಕೊಳ್ಳುವ ನಿರ್ಧಾರವನ್ನು ರಾಜ್ಯ ಸರ್ಕಾರದ ಪ್ರಾಧಿಕಾರವು ತೆಗೆದುಕೊಂಡಿದ್ದು, ಸರ್ಕಾರವೇ ಸ್ವತಃ ವಂಚನೆಯಲ್ಲಿ ಭಾಗಿಯಾಗಿದೆ. ಹೀಗಾಗಿ ರಾಜ್ಯ ಸರ್ಕಾರಿ ತನಿಖಾ ಸಂಸ್ಥೆಗಳಿಂದ ನಿಷ್ಪಕ್ಷಪಾತ ತನಿಖೆಯನ್ನು ನಿರೀಕ್ಷಿಸುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಸಿಬಿಐ ತನಿಖೆ ನಡೆಸುವುದು ಸೂಕ್ತ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular