HomeIndiaBIG NEWS: ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

BIG NEWS: ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ (92) ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿಯ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.

ಆಶಾ ಭೋಸ್ಲೆ ಅವರ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಆಶಾ ಭೋಸ್ಲೆ ಭಾರತ ಕಂಡ ಬಹುಮುಖ ಪ್ರತಿಭೆ. ದಶಕಗಳ ಕಾಲ ಆಶಾ ಭೋಸ್ಲೆ ಅವರ ಸಂಗೀತ ಪಯಣ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ. ವಿಶ್ವದಾದ್ಯಂತ ಕೋಟ್ಯಂತರ ಹೃದಯಗಳನ್ನು ತಲುಪಿದೆ. ಆಶಾ ಭೋಸ್ಲೆ ಅವರ ನಿಧನ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಶಾ ಭೋಸ್ಲೆ ಅವರ ಅಗಲಿಕೆ ಅವರ ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ವಯೋಸಹಜ ಕಾಯಿಲೆ ಹಾಗೂ ಹೃದಯದ ಸೋಂಕಿನಿಂದ ಬಳಲುತ್ತಿದ್ದ ಆಶಾ ಭೋಸ್ಲೆ ಅವರಿಗೆ ನಿನ್ನೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಆಶಾ ಭೋಸ್ಲೆ ನಿಧನಕ್ಕೆ ಇಡೀ ಭಾರತೀಯ ಚಿತ್ರರಂಗವೇ ಕಂಬನಿ ಮಿಡಿದಿದೆ. ಆಶಾ ಭೋಸ್ಲೆ ಅವರು ‘ಭಾರತದ ನೈಟಿಂಗೇಲ್’ ಎಂದೇ ಪ್ರಸಿದ್ಧರಾಗಿದ್ದ ಗಾಯಕಿ. ಅಕ್ಕ ಲತಾ ಮಾಂಗೇಶ್ಕರ್ ಅವರಂತೆ ಭಾರತೀಯ ಸಂಗೀತ ಇತಿಹಾಸದಲ್ಲಿ ಅತ್ಯಂತ ಪ್ರಸಿದ್ಧ ಹಿನ್ನೆಲೆ ಗಾಯಕಿಯಾಗಿ ಹೆಸರುವಾಸಿಯಾಗಿದ್ದರು. 8 ದಶಕಗಳಿಗೂ ಹೆಚ್ಚಿನ ಅವಧಿಯ ವೃತ್ತಿಜೀವನದಲ್ಲಿ ಅವರು ಹಲವಾರು ಭಾರತೀಯ ಭಾಷೆಗಳ ಹಾಡುಗಳಿಗೆ ಧ್ವನಿಯಾಗಿದ್ದರು. 12 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಸಿನಿಮಾ ಮಾತ್ರವಲ್ಲ ಖಾಸಗಿ ಆಲ್ಬಮ್‌ಗಳಲ್ಲಿಯೂ ಹಾಡಿದ್ದಾರೆ. 90ನೇ ವಯಸ್ಸಿನಲ್ಲಿಯೂ ಭಾರತ ಮತ್ತು ವಿದೇಶಗಳಲ್ಲಿ ಲೈವ್ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಅವರು ಹಾಡಿದ ಕೊನೆಯ ಹಾಡೆಂದರೆ, 2022 ರಲ್ಲಿ ಜಾಕಿ ಶ್ರಾಫ್ ಅವರು ನಟಿಸಿದ್ದ ಲೈಫ್ಸ್ ಗುಡ್ ಸಿನಿಮಾದ ರುತ್ ಭೀಗೆ ತಾನ್.

ಆಶಾ ಭೋಸ್ಲೆ ಸಂಗೀತ ಕ್ಷೇತ್ರದಲ್ಲಿ ಮಾತ್ರವಲ್ಲ ಉದ್ಯಮಿ ಕೂಡ ಆಗಿದ್ದರು. ರೆಸ್ಟೋರೆಂಟ್ ನ್ನು ಕೂಡ ಅವರು ಹೊಂದಿದ್ದರು. ಆಶಾಸ್ ಎಂಬ ಅವರ ರೆಸ್ಟೋರೆಂಟ್ ಮುಂಬೈ, ದುಬೈ, ಕುವೈತ್ ಗಳಲ್ಲಿ ಖ್ಯಾತಿ ಪಡೆದುಕೊಂಡಿದೆ.

ಸಂಗೀತ ಕ್ಷೇತ್ರಕ್ಕೆ ಆಶಾ ಭೋಸ್ಲೆ ಅವರು ನೀಡಿದ ಅದ್ಭುತ ಕೊಡುಗೆಗಾಗಿ ಹಲವಾರು ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. 2000ದಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2008ರಲ್ಲಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಸೇರಿದಂತೆ ಹಲವಾರು ಗೌರವಗಳು ಮತ್ತು ಪ್ರಶಸ್ತಿಗಳು ಲಭಿಸಿವೆ. 2011ರಲ್ಲಿ, ಸಂಗೀತ ಇತಿಹಾಸದಲ್ಲಿ ಹೆಚ್ಚು ಧ್ವನಿಮುದ್ರಣಗೊಂಡ ಕಲಾವಿದೆ ಎಂಬ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕೂಡ ಇವರ ಹೆಸರಲ್ಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular