HomeKarnatakaBIG NEWS: ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ: ಸಿಎಂ ಸಿದ್ಧರಾಮಯ್ಯ

BIG NEWS: ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ: ಸಿಎಂ ಸಿದ್ಧರಾಮಯ್ಯ

ಚಿಕ್ಕಮಗಳೂರು: ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅಧಿಕಾರಾವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನವು ಸಂಪುಟ ಪುನರ್ರಚನೆ ವಿಳಂಬಕ್ಕೆ ಕಾರಣವಿರಬಹುದು ಎಂದರು.

ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ಇದುವರೆಗೆ ರಾಜಿನಾಮೆ ನೀಡಿಲ್ಲ. ಮುಂದೆ ನೀಡಬಹುದೇನೋ. ಕಾಂಗ್ರೆಸ್ ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಂಡಿತ. ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಲೀಂ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವರ ಪಕ್ಷ ವಿರೋಧಿ ಕಾರ್ಯಗಳ ಬಗ್ಗೆ ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು ಹೇಳಿರುವುದಿಲ್ಲ. ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಮಲೆನಾಡು ಭಾಗದಲ್ಲಿ ಅರಣ್ಯ ಇಲಾಖೆಯಿಂದ ಹಕ್ಕು ಪತ್ರ ನೀಡುವುದೂ ಸೇರಿದಂತೆ ಹಲವು ವಿಷಯದ ಬಗ್ಗೆ ಸದ್ಯದಲ್ಲಿಯೇ ಸಭೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು. ಕೇರಳ ರಾಜ್ಯದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ಘಟನೆಯ ಬಗ್ಗೆ ಸೂಕ್ತ ತನಿಖೆಯಾಗಲಿದೆ. ಆದರೆ ಕರ್ನಾಟಕ ರಾಜ್ಯ ಪ್ರವಾಸಿಗರಿಗೆ ಸುರಕ್ಷಿತವಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular