ಬೆಂಗಳೂರು: ಪೀಣ್ಯ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಪ್ರೈಓವರ್ ನಲ್ಲಿನ(ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಲೋಡ್ ಟೆಸ್ಟಿಂಗ್ ಮುಂದೂಡಲಾಗಿದೆ.
ಕೇಬಲ್ ಗಳ ದುರಸ್ತಿ ಕಾಮಗಾರಿ ಪೂರ್ಣಗೊಂಡಿರುವುದರಿಂದ, ಅವುಗಳ ಸಮಗ್ರತೆಯ ಪರಿಶೀಲನೆಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅಂತಿಮ ಲೋಡ್ ಟೆಸ್ಟಿಂಗ್ ನಡೆಸುವ ಸಂಬಂಧ ದಿನಾಂಕ: 13-04-2026 ರಂದು ಬೆಳಿಗ್ಗೆ 05:00 ಗಂಟೆಯಿಂದ ದಿನಾಂಕ: 17-04-2026 ರಂದು ಬೆಳಿಗ್ಗೆ 11:00 ಗಂಟೆಯವರೆಗೆ ಪೀಣ್ಯ ಎಲಿವೇಟೆಡ್ ಫೈಓವರ್ ಮೇಲೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವುದಾಗಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿರುತ್ತದೆ.
ಆದರೆ ಕಾರಣಾಂತರಗಳಿಂದ ಉದ್ದೇಶಿತ ಅಂತಿಮ ಲೋಡ್ ಟೆಸ್ಟಿಂಗ್ ಅನ್ನು ಮುಂದೂಡಲಾಗಿರುತ್ತದೆ. ಸದರಿ ಮೇಲೇತುವೆಯು ಎಂದಿನಂತೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿರುತ್ತದೆ ಎಂದು ತಿಳಿಸಲಾಗಿದೆ.

