HomeKarnatakaಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ಆರ್‌ಟಿಇ ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ಆರ್‌ಟಿಇ ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2026 -27ನೇ ಸಾಲಿನ ಆರ್‌ಟಿಇ ದಾಖಲಾತಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

.ಏ 17ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ, ಎಲ್ಕೆಜಿ ಮತ್ತು ಒಂದನೇ ತರಗತಿಗೆ ಅನುದಾನ ರಹಿತ ಶಾಲೆಗಳಲ್ಲಿ ಶೇಕಡ 25ರಷ್ಟು ಲಭ್ಯವಿರುವ ಸೀಟುಗಳು, ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಶಾಲಾವಾರು ಸೀಟುಗಳ ವಿವರ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲು ಸೂಚಿಸಿದೆ.

ಅನುದಾನಿತ ಶಾಲೆಗಳು ಸೇರಿದಂತೆ ಆರ್‌ಟಿಇ ಅಡಿಯಲ್ಲಿ ದಾಖಲಾತಿಗೆ ಅವಕಾಶ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 21ರಿಂದ ಮೇ 17ರ ವರೆಗೆ ಪೋಷಕರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇಐಡಿ ಮೂಲಕ ಸಲ್ಲಿಸಿದ ಅರ್ಜಿಗಳ ದತ್ತಾಂಶದ ನೈಜತೆ ಪರಿಶೀಲನೆ ಏಪ್ರಿಲ್ 22 ರಿಂದ ಮೇ 18ರವರೆಗೆ ನಡೆಯಲಿದೆ.

ಲಾಟರಿ ಪ್ರಕ್ರಿಯೆ ಮೂಲಕ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮೇ 22 ರಂದು ಪ್ರಕಟಿಸಲಾಗುವುದು.

ಆನ್ಲೈನ್ ಲಾಟರಿ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ಮೇ 25 ರಂದು ಪ್ರಕಟವಾಗಲಿದೆ.

ಮೇ 26 ರಿಂದ ಜೂನ್ 8 ರವರೆಗೆ ಶಾಲೆಗಳಲ್ಲಿ ಆರ್‌ಟಿಇ ಅಡಿಯಲ್ಲಿ ದಾಖಲಾತಿ ನಡೆಸಲಾಗುವುದು.

ಇದೇ ಅವಧಿಯಲ್ಲಿ ಶಾಲೆಗಳಿಗೆ ದಾಖಲಾದ ಮೊದಲ ಸುತ್ತಿನ ಮಕ್ಕಳ ಮಾಹಿತಿಯನ್ನು ತಂತ್ರಾಂಶದಲ್ಲಿ ಲಭ್ಯವಾಗುವಂತೆ ಕ್ರಮವಹಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಜೂನ್ 12 ರಂದು ಆನ್ಲೈನ್ ಲಾಟರಿ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕಟವಾಗಲಿದ್ದು, ಜೂನ್ 13 ರಿಂದ 19 ರವರೆಗೆ 2ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಮಕ್ಕಳ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular