HomeIndiaಮಾಲಿನ್ಯ ತಡೆಗೆ ಮಹತ್ವದ ನಿರ್ಧಾರ: ಮುಂದಿನ ವರ್ಷದಿಂದ ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಮಾತ್ರ ಅವಕಾಶ: ದೆಹಲಿ...

ಮಾಲಿನ್ಯ ತಡೆಗೆ ಮಹತ್ವದ ನಿರ್ಧಾರ: ಮುಂದಿನ ವರ್ಷದಿಂದ ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಮಾತ್ರ ಅವಕಾಶ: ದೆಹಲಿ ಸರ್ಕಾರ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜನರನ್ನು ಮಾಲಿನ್ಯ ಸಮಸ್ಯೆಯಿಂದ ಮುಕ್ತಗೊಳಿಸಲು ದೆಹಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಮುಂದಿನ ವರ್ಷದಿಂದ ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಮಾತ್ರ ಅವಕಾಶ ನೀಡುವುದಾಗಿ ಘೋಷಿಸಿದೆ. ಎಲೆಕ್ಟ್ರಿಕ್ ವಾಹನ ನೀತಿ 2026 -2030 ಕರಡನ್ನು ದೆಹಲಿ ಸರ್ಕಾರ ಬಿಡುಗಡೆ ಮಾಡಿದ್ದು, ಹೊಸ ರೀತಿಯ ಪ್ರಕಾರ, 2027ರ ಜನವರಿಯಿಂದ ಹೊಸದಾಗಿ ನೋಂದಣಿಯಾಗುವ ಎಲ್ಲಾ ತ್ರಿಚಕ್ರ ವಾಹನಗಳು ಕೇವಲ ಎಲೆಕ್ಟ್ರಿಕ್ ಆಗಿರಬೇಕು. 2028ರ ಏಪ್ರಿಲ್ 1ರಿಂದ ಎಲೆಕ್ಟ್ರಿಕ್ ಮಾದರಿ ದ್ವಿಚಕ್ರ ವಾಹನಗಳ ನೋಂದಣಿಗೆ ಮಾತ್ರ ಅವಕಾಶ ನೀಡಲಾಗುವುದು.

ವಾಣಿಜ್ಯ ಬಳಕೆಯ ವಾಹನಗಳನ್ನು ಹಂತ ಹಂತವಾಗಿ ಎಲೆಕ್ಟ್ರಿಕ್ ಪರಿವರ್ತನೆ ಅಥವಾ ಹೊಸ ಖರೀದಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಶಾಲಾ ಬಸ್ ಅಥವಾ ವಾಹನಗಳನ್ನು ಹಂತ ಹಂತವಾಗಿ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಗುರಿ ಗೊಂದಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿ ಸಾಮರ್ಥ್ಯದ ಆಧಾರದ ಮೇಲೆ 2.25 ಲಕ್ಷ ರೂಪಾಯಿವರೆಗೂ ಸಬ್ಸಿಡಿ ನೀಡಲಾಗುವುದು. ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡಲು ಚಾರ್ಜಿಂಗ್ ಸೌಕರ್ಯಗಳನ್ನು ವಿಸ್ತರಿಸಲು ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular