ಇಂದು ( ಏಪ್ರಿಲ್ 13 ) ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 21ನೇ ಪಂದ್ಯ ನಡೆಯುತ್ತಿದ್ದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆರಿಸಿಕೊಂಡು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್ ರೈಸರ್ಸ್ ಹೈದರಾಬಾದ್ ಜೋಫ್ರಾ ಆರ್ಚರ್ ಮಾಡಿದ ಮೊದಲ ಓವರ್ನ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ರವಿ ಬಿಷ್ಣೋಯಿಗೆ ಕ್ಯಾಚ್ ನೀಡಿ ಡಕ್ಔಟ್ ಆದರು. ಈ ಮೂಲಕ ರೋಹಿತ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ರನ್ನು ಹಿಂದಿಕ್ಕಿ ಟಿ ಟ್ವೆಂಟಿ ಕ್ರಿಕೆಟ್ನಲ್ಲಿ ವರ್ಷವೊಂದರಲ್ಲಿ ಅತಿಹೆಚ್ಚು ಬಾರಿ ಡಕ್ಔಟ್ ಆದ ಭಾರತದ ಕ್ರಿಕೆಟಿಗ ಎಂಬ ಕೆಟ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಟಿ ಟ್ವೆಂಟಿ ಕ್ರಿಕೆಟ್ನಲ್ಲಿ ಅತಿಹೆಚ್ಚು ಬಾರಿ ಡಕ್ಔಟ್ ಆದ ಭಾರತದ ಕ್ರಿಕೆಟಿಗರು
ಅಭಿಷೇಕ್ ಶರ್ಮಾ ( 2026 ) – 7 ಬಾರಿ ( 18 ಇನ್ನಿಂಗ್ಸ್ )
ರೋಹಿತ್ ಶರ್ಮಾ ( 2018 ) – 6 ಬಾರಿ ( 32 ಇನ್ನಿಂಗ್ಸ್ )
ಸಂಜು ಸ್ಯಾಮ್ಸನ್ ( 2024 ) – 6 ಬಾರಿ ( 32 ಇನ್ನಿಂಗ್ಸ್ )

