ಇಂದು ( ಏಪ್ರಿಲ್ 13 ) ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 21ನೇ ಪಂದ್ಯ ನಡೆಯುತ್ತಿದ್ದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆರಿಸಿಕೊಂಡು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಸನ್ ರೈಸರ್ಸ್ ಹೈದರಾಬಾದ್ ನಾಯಕ ಇಶಾನ್ ಕಿಶನ್ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 216 ರನ್ ಕಲೆಹಾಕಿ ರಾಜಸ್ಥಾನ್ ರಾಯಲ್ಸ್ಗೆ 217 ಸವಾಲಿನ ಗುರಿಯನ್ನು ನೀಡಿದೆ.
ಸನ್ ರೈಸರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದರು. ಬೆನ್ನಲ್ಲೇ ಟ್ರಾವಿಸ್ ಹೆಡ್ ಕೇವಲ 18 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಕಣಕ್ಕಿಳಿದಾಗಿನಿಂದಲೂ ಉತ್ತಮ ಹೊಡೆತಗಳನ್ನು ಬಾರಿಸಿದ ನಾಯಕ ಇಶಾನ್ ಕಿಶನ್ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 91 ರನ್ ಬಾರಿಸಿ ಶತಕ ವಂಚಿತರಾದರು. ಕಿಶನ್ಗೆ ಕೆಲ ಕಾಲ ಸಾಥ್ ನೀಡಿದ ಕ್ಲಾಸೆನ್ 26 ಎಸೆತಗಳಲ್ಲಿ 40, ನಿತಿಶ್ ಕುಮಾರ್ ರೆಡ್ಡಿ 28 (13), ಅನಿಕೇತ್ ವರ್ಮಾ 6, ಸಲೀಲ್ ಅರೋರಾ 13 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ 24 ರನ್ ಗಳಿಸಿದರೆ, ಯಾವುದೇ ರನ್ ಗಳಿಸದ ಹರ್ಷ್ ದುಬೆ ಅಜೇಯರಾಗಿ ಉಳಿದರು.
ರಾಜಸ್ಥಾನ್ ರಾಯಲ್ಸ್ ಜೋಫ್ರಾ ಆರ್ಚರ್ ಎರಡು ವಿಕೆಟ್, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ ಹಾಗೂ ರಿಯಾನ್ ಪರಾಗ್ ತಲಾ ಒಂದೊಂದು ವಿಕೆಟ್ ಪಡೆದರು.

