HomeKarnatakaಬೇಸಿಗೆಯಲ್ಲಿ ಆರೋಗ್ಯದ ರಕ್ಷಣೆಗಾಗಿ ಸಲಹೆಗಳು

ಬೇಸಿಗೆಯಲ್ಲಿ ಆರೋಗ್ಯದ ರಕ್ಷಣೆಗಾಗಿ ಸಲಹೆಗಳು

ಜಿಲ್ಲೆಯಾದ್ಯಂತ ಪ್ರಸ್ತುತ ತಿಂಗಳಿನಿಂದ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರಿಗೆ ಕೆಲವು ಸಲಹೆಗಳನ್ನು ನೀಡಿದೆ.

‎ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು. ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ಸೇವಿಸುವುದು ಉತ್ತಮ. ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಗಾಳಿಯಾಡುವ ಪಾದರಕ್ಷೆ ಧರಿಸಬೇಕು. ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಬೇಕು. ರೇಡಿಯೊ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ ಅಥವಾ ಶಾಖ ತರಂಗ(ಹೀಟ್ ವೇವ್)ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಬೇಕು.

 ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು(ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ. ಈ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಬೇಕು. ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ. ಟೀ ಅಥವಾ ಕಾಫಿ, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯಿರಿ. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108 ಅಥವಾ 102 ಕ್ಕೆ ಕರೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular