HomeKarnatakaBIG NEWS: ರಾಜ್ಯದಲ್ಲಿ 15 ಸಾವಿರ ಉದ್ಯೋಗ ಸೃಷ್ಟಿ: 18,430.44 ಕೋಟಿ ರೂ. ಹೂಡಿಕೆ ಯೋಜನೆಗಳಿಗೆ...

BIG NEWS: ರಾಜ್ಯದಲ್ಲಿ 15 ಸಾವಿರ ಉದ್ಯೋಗ ಸೃಷ್ಟಿ: 18,430.44 ಕೋಟಿ ರೂ. ಹೂಡಿಕೆ ಯೋಜನೆಗಳಿಗೆ ಅನುಮೋದನೆ

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯ ಸೋಮವಾರ ನಡೆದಿದ್ದು, ಒಟ್ಟು 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 15,032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಕೃಷ್ಣಾದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯ ಬಳಿಕ ಅವರು ಮಾತನಾಡಿದರು.

ಸಭೆಯಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. 11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14,906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13,050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1,982 ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಎನ್. ಚಲುವರಾಯಸ್ವಾಮಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೀಜ್ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular