HomeKarnatakaವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಫಲಿತಾಂಶಕ್ಕೆ ಪರೀಕ್ಷೆ- 1, 2ರಲ್ಲಿ ಅತ್ಯಧಿಕ ಅಂಕ ಪರಿಗಣನೆ

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಫಲಿತಾಂಶಕ್ಕೆ ಪರೀಕ್ಷೆ- 1, 2ರಲ್ಲಿ ಅತ್ಯಧಿಕ ಅಂಕ ಪರಿಗಣನೆ

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2 ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೊ ಆ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ.

ಕೆಲ ಅಭ್ಯರ್ಥಿಗಳು ಪರೀಕ್ಷೆ-1 ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು ಸಿಇಟಿ Rank ಗೆ ಪರಿಗಣಿಸಲಾಗುತ್ತದೆ.

ಇಷ್ಟಕ್ಕೂ ದ್ವಿತೀಯ ಪಿಯುಸಿಯ ಎರಡೂ ಪರೀಕ್ಷೆ ಗಳ ಫಲಿತಾಂಶ ಬಂದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸುವುದು. ಹೀಗಾಗಿ ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎನ್ನುವುದು ಸುಳ್ಳು. ಇಂತಹ ವದಂತಿಗಳಿಗೆ‌ ಕಿವಿ ಕೊಡಬೇಡಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ರಾಜ್ಯ ಪಠ್ಯ ಕ್ರಮದ ಪಿಯುಸಿ ಅಭ್ಯರ್ಥಿಗಳಿಗೆ ಮಾತ್ರ ಈ ಎರಡು ಪರೀಕ್ಷೆಗಳ ನಿಯಮ‌ ಅನ್ವಯ ವಾಗುತ್ತದೆ. ಉಳಿದಂತೆ ಕೇಂದ್ರ ಹಾಗೂ ಇತರ ರಾಜ್ಯಗಳ ಬೋರ್ಡ್ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular