HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿಗೂ ಉಚಿತ ಪಠ್ಯಪುಸ್ತಕ ವಿತರಣೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿಗೂ ಉಚಿತ ಪಠ್ಯಪುಸ್ತಕ ವಿತರಣೆ

ಬೆಂಗಳೂರು: ಪ್ರಸಕ್ತ 2026- 27 ನೇ ಸಾಲಿನಿಂದ ರಾಜ್ಯದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ, ಉಚಿತ ಪಠ್ಯಪುಸ್ತಕ ವಿತರಣೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. 10ನೇ ತರಗತಿಯವರೆಗೆ ಸೀಮಿತವಾಗಿದ್ದ ಉಚಿತ ಪಠ್ಯ ಪುಸ್ತಕ ಯೋಜನೆಯನ್ನು ಪಿಯುಸಿಗೂ ವಿಸ್ತರಿಸಿದ್ದು, ನೂತನ ಶೈಕ್ಷಣಿಕ ವರ್ಷದಿಂದಲೇ ಈ ಯೋಜನೆ ಜಾರಿಗೆ ಬರಲಿದೆ.

ರಾಜ್ಯದಲ್ಲಿ 1319 ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, 815 ಅನುದಾನಿತ ಪದವಿ ಪೂರ್ವ ಕಾಲೇಜುಗಳಿವೆ. ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಪೋಷಕರ ಹೊರೆ ಕಡಿಮೆಯಾಲಿದೆ. ಸರ್ಕಾರಿ ಕಾಲೇಜುಗಳಲ್ಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸೇರಿ ಒಟ್ಟು 13.17 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅನುದಾನಿತ ಕಾಲೇಜುಗಳಲ್ಲಿ 1.91 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಒಟ್ಟು 34 ವಿಷಯ ಬೋಧಿಸಲಾಗುತ್ತಿದ್ದು, ಉಚಿತ ಪಠ್ಯ ಪುಸ್ತಕ ವಿತರಣೆ ಅಡಿಯಲ್ಲಿ ಪುಸ್ತಕಗಳನ್ನು ಪೂರೈಕೆ ಮಾಡಲಾಗುವುದು.

ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ, ಅಭ್ಯಾಸ ಪುಸ್ತಕ ವಿತರಣೆ ಸಂಬಂಧ ಶಿಕ್ಷಣ ಇಲಾಖೆ 30.83 ಕೋಟಿ ರೂ.ಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರ ಒಪ್ಪಿಗೆ ಸೂಚಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular