HomeKarnatakaಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸುವುದಕ್ಕೆ ಪೂರ್ವಾನುಮತಿ ನೀಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ಪರಿಸರ ಸ್ನೇಹಿ ಬಟ್ಟೆ ಕೈ ಚೀಲ ಖರೀದಿ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ. ಅಕ್ರಮ ಎಸಗಿದ ಆರೋಪದ ಮೇರೆಗೆ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ರೋಹಿಣಿ ಸಿಂಧೂರಿ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ, ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಎನ್.ಆರ್. ರವಿಚಂದ್ರೇಗೌಡ ಅವರಿಗೆ ನೋಟಿಸ್ ಜಾರಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ವಚ್ಛ ಭಾರತ ಅಭಿಯಾನ ಭಾಗವಾಗಿ ಮೈಸೂರು ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸಬೇಕು. ಪ್ಲಾಸ್ಟಿಕ್ ಬಳಕೆಗೆ ಇತಿಶ್ರೀ ಹಾಡಿ ಬಟ್ಟೆ ಕೈ ಚೀಲ ಖರೀದಿಸಿ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲೆಯ ನಗರ, ಗ್ರಾಮಾಂತರ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿದ್ದರು. ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಚೀಲಕ್ಕೆ 13 ರೂಪಾಯಿ ಇದ್ದರೆ 52 ರೂ. ದರ ನೀಡಿ ಖರೀದಿಸಲಾಗಿದೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ 7.65 ಕೋಟಿ ರೂ. ನಷ್ಟ ಉಂಟು ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಯೋಜನ ನೀಡುವ ಉದ್ದೇಶದಿಂದ ಕಲ್ಯಾಣ ಯೋಜನೆಗಳಿಗಾಗಿ ಮೀಸಲಿಟ್ಟ ಹಣವನ್ನು ಬಟ್ಟೆ ಕೈ ಚೀಲ ಖರೀದಿಗೆ ಬಳಕೆ ಮಾಡಲಾಗಿದೆ. ಭ್ರಷ್ಟಾಚಾರ ಎಸಗಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಅಕ್ರಮದ ಕುರಿತಂತೆ ಮೊಕದ್ದಮೆ ದಾಖಲಿಸಬೇಕು ಎಂದು ಎಸಿಬಿಗೆ 2021 ರ ಅಕ್ಟೋಬರ್ 13 ರಂದು ದೂರು ನೀಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular